ಮಂಗಳೂರಿನಲ್ಲಿ ಆರದ ಪೌರತ್ವ ಕಾಯ್ದೆಯ ಕಿಚ್ಚು: ಶಾಲಾ-ಕಾಲೇಜುಗಳಿಗೆ ರಜೆ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಈಗಾಗಲೇ ಕರ್ಫ್ಯೂ ಜಾರಿ ಮಾಡಲಾಗಿದೆ. ಇದೀಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು, [ಡಿ.19]: ಸೆಕ್ಷನ್ 144 ಜಾರಿ ಮಾಡಿದ್ರೂ ಸಹ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.
ಅಷ್ಟೇ ಅಲ್ಲದೇ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಗಲಾಟೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮಂಗಳೂರು ಉತ್ತರ, ದಕ್ಷಿಣ, ಪೂರ್ವ, ಬರ್ಕೆ ಮತ್ತು ಉರ್ವ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಮಂಗಳೂರು: ಪೌರತ್ವ ಕಿಚ್ಚು ನಂದಿಸಲು ಗಾಳಿಯಲ್ಲಿ ಗುಂಡು
20 ರಂದು ಮಧ್ಯರಾತ್ರಿವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಸ್ಪಷ್ಟಪಡಿಸಿದ್ದಾರೆ.
ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಡಿಸೆಂಬರ್ 20 ರಂದು ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್ ಆದೇಶಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚಿಗೆ ಮಂಗಳೂರು ಧಗ-ಧಗ: ಕರ್ಫ್ಯೂ ಜಾರಿ
ಕೇವಲ ಮಂಗಳೂರು ನಗರ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಮಂಗಳೂರು ಗ್ರಾಮಾಂತರದಲ್ಲಿ ಎಂದಿನಂತೆ ಶಾಲಾ-ಕಾಲೇಜುಗಳು ಇರಲಿವೆ.