ಪೌರತ್ವ ಕಾಯ್ದೆ: ಪ್ರತಿಭಟನೆ ಹಿಂಪಡೆದ ಕಾಂಗ್ರೆಸ್ ನಾಯಕರು

ದೇಶದಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಭಾರೀ ಗಲಭೆ ಸೃಷ್ಟಿಯಾಗುತ್ತಿದೆ. ಹಲವೆಡೆ ಸಾವಿರಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಕೈ ನಾಯಕರು ನಿರ್ಧಾರ ಕೈ ಬಿಟ್ಟಿದ್ದಾರೆ. 

CAA Protest Congress Leader Decision Withdrawal in Shivamogga

ಶಿವಮೊಗ್ಗ [ಡಿ. 19]:  ದೇಶದ ಎಲ್ಲೆಡೆ ಪೌರತ್ವ ಕಾಯ್ದೆ ವಿರೋಧಿಸಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿದರೂ ಕೂಡ ಎಲ್ಲೆಡೆ ತೀವ್ರ ಪ್ರತಿಭಟನೆ ನಡೆಯುತ್ತಿದೆ. 

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಹಲವೆಡೆ ಸಾವಿರಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಪ್ರತಿಭಟನೆ ತೀವ್ರತೆ ಹೆಚ್ಚಿದೆ. ಆದರೆ ಶಿವಮೊಗ್ಗದಲ್ಲಿ ಕೆಯ ನಾಯಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಶಿವಮೊಗ್ಗದಲ್ಲಿ ಪೌರತ್ವ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲು ನಿರ್ಧರಿಸಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಜಿಲ್ಲಾಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು.

ರಾಜ್ಯದಲ್ಲಿ ಮೂರು ದಿನ ನಿಷೇಧಾಜ್ಞೆ: ಏನೇನ್ ಇರುತ್ತೆ..? ಏನೇನ್ ಇರಲ್ಲ?...

 ನಿಷೇಧಾಜ್ಞೆ. ಬಿಗಿ ಬಂದೋಬಸ್ತ್ ಇರುವ ಹಿನ್ನೆಲೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ಆದರೆ ಸ್ಥಳದಲ್ಲಿ ಸೇರಿದ್ದ ಕಾರ್ಯರ್ತರು ಪ್ರತಿಭಟನೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. 

ಆದರೆ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿ ಕೆಪಿಸಿಸಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದರು. 

ಕಾಂಗ್ರೆಸ್ ಕಚೇರಿಯ ಮುಂದೆ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರತಿಭಟನೆ ಹಿಂಪಡೆದ ನಿರ್ಧಾರದಿಂದ ಪುನಃ ಕೈ ನಾಯಕರು ವಾಪಸ್ ತೆರಳಿದರು. 

Latest Videos
Follow Us:
Download App:
  • android
  • ios