ಸಿಎಎ ವಿರೋಧಿ ಹೋರಾಟ ಕಾವೇರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದೆ.
ಬೆಂಗಳೂರು [ಡಿ.20]: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟ ಕಾವೇರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದ್ದು, ಶುಕ್ರವಾರ ಸಹ ಪುರಭವನ ವ್ಯಾಪ್ತಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರು ಭದ್ರತೆಗೆ ನಿಯೋಜನೆಯಾಗಲಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿದ್ದರೂ ವಿದ್ಯಾರ್ಥಿಗಳು ಹಾಗೂ ಚಿಂತಕರು ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು, ನಗರದ ಪುರಭವನ ಮುಂದೆ ಜಮಾಯಿಸಿ ಗುರುವಾರ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ಭದ್ರತೆ ಮತ್ತಷ್ಟುಬಿಗಿಗೊಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್, ನಿಷೇಧಾಜ್ಞೆ ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುತ್ತದೆ. ಪ್ರತಿಭಟನೆಗಳಿಗೆ ಅನುಮತಿ ನೀಡಿಲ್ಲ. ಆದಾಗ್ಯೂ ಕೆಲವರು ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದರು.
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಕೃತ್ಯ..
ಪ್ರತಿಭಟನೆ ಕೇಂದ್ರವಾಗಿರುವ ಪುರಭವನ ವ್ಯಾಪ್ತಿಯಲ್ಲಿ ಹೆಚ್ಚಿನ ಬಂದೋಬಸ್‌್ತ ಕಲ್ಪಿಸಲಾಗುತ್ತದೆ. 50 ಕೆಎಸ್‌ಆರ್‌ಪಿ, 40 ನಗರ ಸಶಸ್ತ್ರ ಮೀಸಲು ಪಡೆಯ ತುಕಡಿಗಳು ಸೇರಿದಂತೆ ಸುಮಾರು ನಾಲ್ಕು ಸಾವಿರ ಪೊಲೀಸರನ್ನು ಬಂದೋಬಸ್‌್ತ ಬಳಸಿಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ಆಯುಕ್ತರು ಮಾಹಿತಿ ನೀಡಿದರು.
