43.46 ಕೋಟಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಪ್ರಭು ಚವ್ಹಾಣ

ಯಾದಗಿರಿಯಲ್ಲಿ ಅಂತರ್ಜಲ ಮಟ್ಟಸುಧಾರಿಸುವುದು ಮತ್ತು ರೆೃತರ ಅನುಕೂಲಕ್ಕಾಗಿ ಜಿಲ್ಲೆಯ ಹಲವೆಡೆ ಬ್ರಿಡ್ಜ್‌ ಕಂ ಬ್ಯಾರೇಜ್‌ಗಳು ಮತ್ತು ಆಣೆಕಟ್ಟುಗಳನ್ನು ನಿರ್ಮಿಸುವ ಸದುದ್ದೇಶದ ಯೋಜನೆಗೆ ಸಚಿವ ಸಂಪುಟದಿಂದಲೂ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ಕೆಲಸ ಆರಂಭಗೊಳ್ಳಲಿದೆ ಎಂದ ಸಚಿವ ಪ್ರಭು ಚವ್ಹಾಣ.  

Cabinet Approves 43.46 Crore Project in Kalaburagi and Yadgir says Prabhu Chauhan grg

ಯಾದಗಿರಿ(ಫೆ.22): ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ 138 ಬ್ರಿಡ್ಜ್‌ ಕಂ ಬ್ಯಾರೇಜ್‌ ಹಾಗೂ ಆಣೆಕಟ್ಟುಗಳ ನಿರ್ಮಾಣ ಕಾಮಗಾರಿಗಳನ್ನು ಕೆೃಗೆತ್ತಿಕೊಳ್ಳಲು 443.46 ಕೋಟಿ ರು.ಗಳ ಯೋಜನೆಗೆ ಸಚಿವ ಸಂಪುಟದಿಂದ ಅನುಮೋದನೆ ಸಿಕ್ಕಿದೆ ಎಂದು ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವರು, ಯಾದಗಿರಿ ಜಿಲ್ಲೆಯಲ್ಲಿ ರೆೃತರು ಹೆಚ್ಚಾಗಿ ಮಳೆಯಾಶ್ರಿತ ಬೇಸಾಯ ಮಾಡುವುದರಿಂದ ಈ ರೆೃತರ ಆರ್ಥಿಕ ಬೆಳವಣಿಗೆಯನ್ನು ಸುಧಾರಿಸಲು ನೆೃಸರ್ಗಿಕ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಂಡು ರೆೃತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರಸ್ತಾವನೆಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸಂಬಂಧಿಸಿದ ಸಚಿವರು ಹಾಗೂ ಮುಖ್ಯಮಂತ್ರಿಯವರಿಗೆ ಯೋಜನೆಯ ಜಾರಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಅವಶ್ಯಕ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.

ASSEMBLY ELECTION: ಯುವ ಮತದಾರರನ್ನು ಸೆಳೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್!

ಯಾದಗಿರಿಯಲ್ಲಿ ಅಂತರ್ಜಲ ಮಟ್ಟಸುಧಾರಿಸುವುದು ಮತ್ತು ರೆೃತರ ಅನುಕೂಲಕ್ಕಾಗಿ ಜಿಲ್ಲೆಯ ಹಲವೆಡೆ ಬ್ರಿಡ್ಜ್‌ ಕಂ ಬ್ಯಾರೇಜ್‌ಗಳು ಮತ್ತು ಆಣೆಕಟ್ಟುಗಳನ್ನು ನಿರ್ಮಿಸುವ ಸದುದ್ದೇಶದ ಯೋಜನೆಗೆ ಸಚಿವ ಸಂಪುಟದಿಂದಲೂ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ಕೆಲಸ ಆರಂಭಗೊಳ್ಳಲಿದೆ ಎಂದರು.

ಜಿಲ್ಲೆಯಲ್ಲಿ ಈ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಯೋಜನೆಯ ಜಾರಿಯ ನಂತರ ಅಂತರ್ಜಲ ವೃದ್ಧಿಯ ಜೊತೆಗೆ ರೆೃತರಿಗೆ ಸಾಕಷ್ಟು ಅನುಕೂಲವಾಗಲಿದೆ. ಉಪಯೋಗಕಾರಿ ಯೋಜನೆಗೆ ಸಚಿವ ಸಂಪುಟದಿಂದ ಅನುಮೋದನೆ ಸಿಕ್ಕಿರುವುದಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಹಾಗೂ ಇಲಾಖೆಯ ಸಚಿವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

Latest Videos
Follow Us:
Download App:
  • android
  • ios