ಚಾಮರಾಜನಗರ: ಜ.9 ಇಲ್ಲವೇ 16ಕ್ಕೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ನೂತನ ವರ್ಷಾರಂಭದಲ್ಲಿ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ದಿನಾಂಕ ನಿಗದಿಯಾಗಿರಲಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ಅಥವಾ 16ರಂದು ಸಭೆ ನಡೆಸಲು ತಯಾರಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. 
 

Cabinet Meeting To be Held Soon at Male Mahadeshwara Hills in Chamarajanagara grg

ಚಾಮರಾಜನಗರ(ಜ.01):  ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ಜ.9 ಅಥವಾ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. 

ನೂತನ ವರ್ಷಾರಂಭದಲ್ಲಿ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ದಿನಾಂಕ ನಿಗದಿಯಾಗಿರಲಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ಅಥವಾ 16ರಂದು ಸಭೆ ನಡೆಸಲು ತಯಾರಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.  

ಚಾಮರಾಜನಗರ: ಸಾಕುಪ್ರಾಣಿಗಳ ಭಕ್ಷಕ ಚಿರತೆ ಬಂಧಿಸಲು ಡ್ರೋನ್‌ ಬಳಕೆ

ಅಗತ್ಯ ಸಿದ್ಧತೆ: 

ಸಚಿವ ಸಂಪುಟ ಸಭೆಯನ್ನು ಅಚ್ಚುಕಟ್ಟಾಗಿ ನಡೆಸುವ ಸಂಬಂಧ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ 15 ಕೋಟಿ ರು. ವೆಚ್ಚದಡಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲದೇ ಬೆಟ್ಟದಲ್ಲಿ ಈಗಾಗಲೇ ಜಿಲ್ಲಾಧಿಕಾರಿ, ಶಾಸಕರು ಸಭೆ ನಡೆಸಿ ಸಿದ್ದತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. 

ದೀಪದಗಿರಿ ಒಡ್ಡುವಿನಲ್ಲಿ ಸಭೆ:ಸಭೆಯನ್ನು ದೀಪದಗಿರಿ ಒಡ್ಡುವಿನ ಶ್ರೀಮಹದೇಶ್ವರ ಪ್ರತಿಮೆಯ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆದ್ದರಿಂದ ಸಭಾಂಗಣ, ಆಸನ ವ್ಯವಸ್ಥೆ, ಊಟ ಹಾಗೂ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳುವುದರ ಮೂಲಕ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಮಾಹಿತಿ ನೀಡಿದರು. 

ಸಚಿವರು, ಶಾಸಕರು, ಅಧಿಕಾರಿಗಳು ಭಾಗಿ:ಸರ್ಕಾರದ ಎಲ್ಲಾ ಸಚಿವರು, ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ, ಅಧಿಕಾರಿ ಸಿಬ್ಬಂದಿ ವರ್ಗ ಯಾವುದೇ ಲೋಪದೋಷವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ವಿವಿಧ ಸಮಿತಿಗಳ ಅಧಿಕಾರಿಗಳ ತಂಡವನ್ನು ರಚಿಸಿದ್ದು, ಸೂಕ್ತ ನಿರ್ದೇಶನ ನೀಡಿದ್ದಾರೆ. 

ಲಿಂಗಾಯತರು ಹಿಂದೂಗಳು ಅಲ್ಲ, ವೀರಶೈವರು ಅಲ್ಲ: ಹಿಮ್ಮಡಿ ಮುರುಘರಾಜೇಂದ್ರ ಶ್ರೀ

ಜಿಲ್ಲೆಯ ಅಭಿವೃದ್ಧಿಗೆ ಪೂರಕ: 

ಚಾಮರಾಜನಗರ ಜಿಲ್ಲೆಯೂ ಮೈಸೂರು ಜಿಲ್ಲೆಯಿಂದ ಬೇರ್ಪಟ್ಟು ನೂತನ ಜಿಲ್ಲೆಯಾಗಿ ಸುಮಾರು 27ವರ್ಷ ಕಳೆದರೂ ಇನ್ನೂ ಪೂರ್ಣ ಪ್ರಮಾಣದ ಮೂಲ ಸೌಲಭ್ಯಗಳು ದೊರಕಿಲ್ಲ. ನಂಜುಂಡಪ್ಪ ವರದಿಯ ಪ್ರಕಾರ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿದೆ. ಆದರೆ ಜಿಲ್ಲೆಯ ಅಭಿವೃದ್ಧಿಗೆ ಈವರೆಗೂ ಸರ್ಕಾರದಿಂದ ವಿಶೇಷ ಅನುದಾನ ದೊರೆತಿಲ್ಲ. ಹಾಗಾಗಿ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗಲಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಜನರು ನಿರೀಕ್ಷಿಸಿದ್ದಾರೆ. 

ಮುಖ್ಯಮಂತ್ರಿಗಳ ವಿಶೇಷ ಕಾಳಜಿ: 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ಮೇಲೆ ಅವರಿಗೆ ವಿಶೇಷ ಆಸಕ್ತಿ ಇದ್ದು, ಈ ಭಾಗದಲ್ಲಿ ಅವರ ಹೆಸರು ಶಾಶ್ವತವಾಗಿ ಉಳಿಯಬೇಕೆನ್ನುವ ಉದ್ದೇಶದಿಂದ ಸಚಿವ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios