ಬಳ್ಳಾರಿ(ಮಾ.13) : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಅವರ ಕಾರು ಗುರುವಾರ ಬೆಳಗಿನಜಾವ ಆಂಧ್ರಪ್ರದೇಶದ ಅನಂತಪುರದಲ್ಲಿ ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಚಾಲಕ ಬಸವ ಗಂಭೀರವಾಗಿ ಗಾಯಗೊಂಡಿದ್ದು ಹಾಲಶ್ರೀಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಅವರನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿ ಸ್ವಾಮೀಜಿ, ಚಾಲಕ ಹಾಗೂ ಓರ್ವ ಶಿಷ್ಯರು ಪ್ರಯಾಣ ಮಾಡುತ್ತಿದ್ದರು.

ಚಿನ್ನಾಭರಣ ಕದ್ದು ಬೆಂಕಿ ಇಟ್ಟ ಖದೀಮರು: ಸುಟ್ಟು ಕರಕಲಾದ ಮನೆ

ಅನಂತಪುರದಲ್ಲಿ ರಸ್ತೆಯಲ್ಲಿ ಸಾಗುವಾಗ ಟಾಟಾ ಏಸ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಇನ್ನೊಬ್ಬ ಶಿಷ್ಯ ಅಪಾಯದಿಂದ ಪಾರಾಗಿದ್ದಾರೆ. ಶ್ರೀಮಠದ ಭಕ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಸದ್ಗುರು ಶಿವಯೋಗಿ ಹಾಲಸ್ವಾಮಿ ಮಠದ ಸಣ್ಣ ಹಾಲ ಸ್ವಾಮೀಜಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ.