Asianet Suvarna News Asianet Suvarna News

ಲಿಂಗಸುಗೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದ ಕಾರು: ಇಬ್ಬರ ಸಾವು

ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದ ಕಾರು| ಸ್ಥಳದಲ್ಲೇ ಇಬ್ಬರ ಸಾವು| ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದ ಬಳಿ ನಡೆದ ಘಟನೆ| ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ 

Car Accident Near Lingsugur in Raichuru Two People Dead
Author
Bengaluru, First Published Jan 20, 2020, 4:21 PM IST
  • Facebook
  • Twitter
  • Whatsapp

ರಾಯಚೂರು(ಜ.20): ರಸ್ತೆ ಬದಿಯ ಸೇತುವೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರಿಗೆ ಗಾಯವಾದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದ ಬಳಿ ಇಂದು(ಸೋಮವಾರ) ನಡೆದಿದೆ.  

ಮೃತರನ್ನು ಚಂದಾಲಿಂಗ, ರವಿ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಗುರುತು ತಿಳಿದು ಬಂದಿಲ್ಲ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿನ ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗಾಯಾಗೊಂಡವರನ್ನ ಲಿಂಗಸಗೂರು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow Us:
Download App:
  • android
  • ios