ವಿಜಯಪುರ(ಫೆ.09): ಕಾರು, ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪಾರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರಿಗೆ ಗಾಯವಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು(ಭಾನುವಾರ) ನಡೆದಿದೆ. 

ಮೃತರನ್ನ ರಾಜೇಶ(32), ಏಸುದಾಸ(32), ಭುಜಂಗರಾವ(38) ಎಂದು ಗುರುತಿಸಲಾಗಿದೆ. ಮೃತರು ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಾರು ಹೊಸಪೇಟೆಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.  ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಕೂಡಗಿ ಎನ್ ಟಿ ಪಿ ಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ. 

ಈ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಇಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಹೆದ್ದಾರಿ ತಡೆ ನಡೆಸಿದ್ದಾರೆ.