ಈ ವರ್ಷ ಲಸಿಕೆ ಕೂಡಾ ಇಲ್ಲದ ಕಾರಣ ಮಂಗನ ಕಾಯಿಲೆ ಯಾವುದೇ ಕ್ಷಣದಲ್ಲಿ ಉಲ್ಬಣಿಸುವ ಆತಂ ಕವಿದೆ. ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಮಾಹಿತಿ ಕೊರತೆಯಾಗದಂತೆ ಕೆಎಫ್‌ಡಿ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಗಂಭೀರ ಎಚ್ಚರ ವಹಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. 

ತೀರ್ಥಹಳ್ಳಿ (ಫೆ.19): ಈ ವರ್ಷ ಲಸಿಕೆ ಕೂಡಾ ಇಲ್ಲದ ಕಾರಣ ಮಂಗನ ಕಾಯಿಲೆ ಯಾವುದೇ ಕ್ಷಣದಲ್ಲಿ ಉಲ್ಬಣಿಸುವ ಆತಂ ಕವಿದೆ. ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಮಾಹಿತಿ ಕೊರತೆಯಾಗದಂತೆ ಕೆಎಫ್‌ಡಿ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಗಂಭೀರ ಎಚ್ಚರ ವಹಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ನಡೆದ ತ್ರೈಮಾಸಿಕ ಸಭೆಯ ಇಲಾಖಾ ವಾರು ಪ್ರಗತಿ ಪರಿಶೀಲನೆ ನಡೆಸಿ, ಈ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನೇಶನ್ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಆರೋಗ್ಯ ಇಲಾಖೆ ಮುಂಜಾಗರೂಕತೆಯಿಂದ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

Add Asianetnews Kannada as a Preferred SourcegooglePreferred

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರೋಗಿಗಳು ಶುಲ್ಕ ನೀಡಬೇಕಿಲ್ಲ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ನಟರಾಜ್ ಸಭೆಗೆ ಮಾಹಿತಿ ನೀಡಿ, ತಾಲೂಕಿನಲ್ಲಿ ಈವರೆಗೆ 13 ಮಂಗ ನಕಾಯಿಲೆ ಪ್ರಕರಣ ದಾಖಲಾಗಿದೆ. ಇವರಲ್ಲಿ 8 ಮಂದಿ ಮಣಿಪಾಲದಲ್ಲಿ ಹಾಗೂ 5 ಜನರು ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ದೂರದ ಊರಿನಿಂದ ಬಂದಿರುವ ಕಾರ್ಮಿಕರು ನಮ್ಮ ನಿಯಂತ್ರಣಕ್ಕೆ ಬರುತ್ತಿಲ್ಲ. ಅಂಥವರಲ್ಲೇ ಹೆಚ್ಚು ಪಾಸಿಟಿವ್ ಬಂ ದಿದೆ. ಕೊರೋನಾದ 5 ಪ್ರಕರಣಗಳು ಡಿಸೆಂಬರ್ ತಿಂಗಳಲ್ಲಿ ದಾಖಲಾಗಿದೆ ಎಂದು ಹೇಳಿದರು. 

ಬಾವಿ ತೋಡುವ ಕೆಲಸವನ್ನು ಕೈಬಿಡಿ: ಗೌರಿ ನಾಯ್ಕ್ ಅವರಿಗೆ ಮನವಿ ಮಾಡಿದ ಸಚಿವ ಮಂಕಾಳು ವೈದ್ಯ!

ಗಂಭೀರ ಸಂಶೋಧನೆ ಅಗತ್ಯ: ಪಶುವೈದ್ಯ ಇಲಾಖೆಯ ಡಾ. ಮುರುಳೀಧರ್ ಕೆಎಫ್‌ಡಿ ಕುರಿತಂತೆ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಭಾರಿ ಸಂಖ್ಯೆಯ ಮಂಗಗಳಿದ್ದರೂ ಈ ಸೋಂಕು ಈ ವರೆಗೆ ಪಟ್ಟಣದಲ್ಲಿ ಕಾಣಿಸಿಕೊಂಡಿಲ್ಲ. ರೋಗಾಣು ಹರಡುತ್ತಿರುವಟಿಕ್ಸ್‌ ಬೇರೆರೂಪತಾಳುತ್ತಿರುವಂತಿದೆ. ಈ ಬಗ್ಗೆ ಬೇರೆ ಆಯಾಮಗಳಿಂದಲೂ ರೀಸರ್ಚ್ ಮಾಡುವ ಅಗತ್ಯವಿದೆ ಎಂದರು. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸಾಧ್ಯತೆಯಿದೆ. ಈಗಾಗಲೇ ಕೊಳವೆಬಾವಿಗಳೂ ವಿಫಲವಾಗುತ್ತಿವೆ. 

ಹೀಗಾಗಿ, ನೀರಿನ ಟ್ಯಾಂಕ್ ನಿರ್ಮಾಣ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳಿಗೆ ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ಪ್ರಾಣಿಗಳಿಗೂ ಕುಡಿಯುವ ನೀರು ಸಿಗದ ಕಾರಣ ಊರಿಗೆ ದಾಳಿ ಇಡುವ ಸಾಧ್ಯತೆಯಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದೂ ಹೇಳಿದರು. ಶಾಲಾ ಆವರಣದ ಮರಗಳ ಕಡಿತಲೆಗೆ ಅಡಚಣೆ ಮಾಡಿದಲ್ಲಿ ಸಂಭವಿಸುವ ಅವಘಡಗಳಿಗೆ ಅರಣ್ಯಾ ಧಿಕಾರಿಗಳೇ ಹೊಣೆ. ಗಾಳಿಮಳೆಗೆ ಮನೆಗಳ ಮೇಲೆ ಮರಗಳು ಬೀಳುವಂತಿದ್ದರೂ ಕಾನೂನಿನ ನೆವದಲ್ಲಿ ನೀವುಗಳು ಕ್ರಮ ತೆಗೆದುಕೊಳ್ಳುವುದಿಲ್ಲ. ಇಂತಹ ಸಂದರ್ಭದ ಘಟನೆಗಳ ಗಂಭೀರತೆಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದೂ ಹೇಳಿದರು.

ಸುಪ್ರೀಂಕೋರ್ಟ್ ಹೇಳಿದ ಜಾಗದಲ್ಲಿ 'ರಾಮಮಂದಿರ' ಕಟ್ಟಿಲ್ಲ: ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ

9.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೋಣಂದೂರಿನ ಸರ್ಕಾರಿ ಆಸ್ಪತ್ರೆ ಕಟ್ಟಡದ ಕಾಮಗಾರಿ ಮಾಹಿತಿ ಪಡೆದ ಶಾಸಕರು, ಈ ಮೊದಲು ನಿರ್ಮಿಸಿದ್ದ ಜೆಸಿ ಆಸ್ಪತ್ರೆ ಕಾಮಗಾರಿ ಕಳಪೆಯಾಗಿದೆ. ಕೋಣಂದೂರಿನ ಸರ್ಕಾರಿ ಆಸ್ಪತ್ರೆ ಕಾಮಗಾರಿಯಲ್ಲಿ ಸಣ್ಣ ದೋಷ ಕಂಡು ಬಂದರೂ ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದೂ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗೆ ಎಚ್ಚರಿಕೆ ನೀಡಿದರು. ಸಭೆಗೆ ಬಾರದಿರುವ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ನೋಟಿಸ್ ನೀಡಿ ಕ್ರಮ ತಗೋಬೇಕು, ಮಹತ್ವದ ಸಭೆ ಗೌಣವಾಗಿ ಕಾಣುವವರನ್ನೂ ಗೌಣ ವಾಗಿ ಕಾಣಬೇಕಾದೀತು ಎಂದು ಎಚ್ಚರಿಸಿದರು.