ವೀರಶೈವ ಪರಂಪರೆ ಮುಂದಿನ ಪೀಳಿಗೆಗೆ ತಲುಪಿಸಿ: ಬಿಎಸ್‌ವೈ

ವೀರಶೈವ ಆಚಾರ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆ ಹಾಗೂ ಆಚರಣೆ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Carry on the Veerashaiva heritage to the next generation says bsy at shivamogga rav

ಶಿವಮೊಗ್ಗ (ನ.19) : ವೀರಶೈವ ಆಚಾರ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆ ಹಾಗೂ ಆಚರಣೆ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶ್ರೀ ವೀರಶೈವ ಕಲ್ಯಾಣ ಮಂದಿರ ವತಿಯಿಂದ ನಗರದ ಜೆ.ಎಚ್‌.ಪಟೇಲ್‌ ಬಡಾವಣೆಯಲ್ಲಿ 8 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ವೀರಶೈವ ಸಾಂಸ್ಕೃತಿಕ ಭವನವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ನಾನು ಮುಖ್ಯಮಂತ್ರಿ ಆಗಿದ್ದಾಗ ವೀರಶೈವ ನಿಗಮ ಸ್ಥಾಪನೆ ಮಾಡಿದ್ದೇನೆ. ಶಿವಮೊಗ್ಗ ನಗರದ ಅಭಿವೃದ್ಧಿ ಗೆ ಸಂಪೂರ್ಣ ಶ್ರಮಿಸಿದ್ದೇನೆ. ಶಿವಮೊಗ್ಗ ನಗರ ಮತ್ತು ಜಿಲ್ಲೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರದಿಂದ ಹೆಚ್ಚಿನ ಅನುದಾನ ತಂದಿದ್ದು, ಮಾದರಿ ಜಿಲ್ಲೆಯಾಗಿ ರೂಪಿಸಲು ಕೆಲಸ ಮಾಡುತ್ತಿದ್ದಾರೆ. ಡಿಸೆಂಬರ್‌ ಅಂತ್ಯದೊಳಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಉದ್ಘಾಟನೆ ಆಗಲಿದೆ ಎಂದು ತಿಳಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರ ವಿಚಾರದಲ್ಲಿ ಕೈ-ಕಮಲ ರಾಜಕಾರಣ

ಶಾಸಕ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ವೀರಶೈವ ಸಾಂಸ್ಕೃತಿಕ ಭವನವು ಸಮಾಜದ ದೊಡ್ಡ ಆಸ್ತಿ. ಸಮಾಜದ ಎಲ್ಲ ಬಂಧುಗಳ ಸಹಕಾರದಿಂದ ಭವನ ನಿರ್ಮಾಣ ಆಗಿದೆ. ಮುಂದಿನ ದಿನಗಳಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಶ್ರೀ ವೀರಶೈವ ಕಲ್ಯಾಣ ಮಂದಿರದ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಎನ್‌.ಜೆ. ರಾಜಶೇಖರ್‌ ಮಾತನಾಡಿ, 1968 ರಲ್ಲಿ ವೀರಶೈವ ಮಂದಿರ ಆರಂಭಗೊಂಡು ಈವರೆಗೂ ಸೇವಾ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಸುಸಜ್ಜಿತವಾಗಿ ನಿರ್ಮಾಣ ಆಗಿರುವ ವೀರಶೈವ ಸಾಂಸ್ಕೃತಿಕ ಭವನ ಕೂಡ ಸೇವೆಯ ಆಶಯದಿಂದ ಕೆಲಸ ಮಾಡಲಿದೆ. ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌.ಈಶ್ವರಪ್ಪ, ಬಿ.ವೈ.ರಾಘವೇಂದ್ರ ಸೇರಿದಂತೆ ಎಲ್ಲರ ಸಹಕಾರದಿಂದ ಭವನ ನಿರ್ಮಾಣ ಆಗಿದೆ. ಸಾಂಸ್ಕೃತಿಕ ಭವನದಲ್ಲಿ ವಿವಾಹ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಬಹುದಾಗಿದೆ ಎಂದರು.

ಬಾಳೆಹೊನ್ನೂರು ರಂಭಾಪುರಿ ಶ್ರೀ ಡಾ. ವೀರಸೋಮೇಶ್ವರ ಜಗದ್ಗುರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಲ್ಲ ಸಮುದಾಯದ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಸರ್ವ ಜನಾಂಗದ ಪ್ರಗತಿಗೆ ಶ್ರಮಿಸಿದ ನಾಯಕ ಯಡಿಯೂರಪ್ಪ. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೇಶದ ಎಲ್ಲ ಸಂಸದರಿಗಿಂತ ಹೆಚ್ಚಿನ ಅನುದಾನವನ್ನು ಶಿವಮೊಗ್ಗ ಕ್ಷೇತ್ರಕ್ಕೆ ತಂದಿದ್ದಾರೆ. ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಯಲ್ಲಿ ನಂಬರ್‌ ಒನ್‌ ಸ್ಥಾನ ಆಗಿಸಲು ಶ್ರಮಿಸುತ್ತಿದ್ದಾರೆ ಎಂದರು.

ಯಡಿಯೂರು ಕ್ಷೇತ್ರ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಶ್ರೀ ವೀರಶೈವ ಕಲ್ಯಾಣ ಮಂದಿರ ಅಧ್ಯಕ್ಷ ಟಿ.ವಿ.ಈಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು.

ಶರಾವತಿ ಮುಳುಗಡೆ ಸಂತ್ರಸ್ತರ ವಿಚಾರದಲ್ಲಿ ಕೈ-ಕಮಲ ರಾಜಕಾರಣ

ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ ನಾಯ್‌್ಕ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಮೇಯರ್‌ ಎಸ್‌.ಶಿವಕುಮಾರ್‌, ಮಾಜಿ ಮೇಯರ್‌ ಸುನೀತಾ ಅಣ್ಣಪ್ಪ, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್‌.ಎಸ್‌. ಜ್ಯೋತಿಪ್ರಕಾಶ್‌, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ, ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್‌.ಜೆ.ನಾಗರಾಜ್‌, ಶ್ರೀ ಬಸವೇಶ್ವರ ಅಕಾಡೆಮಿ ಆಫ್‌ ಎಜುಕೇಷನ್‌ ಅಧ್ಯಕ್ಷ ಎಸ್‌.ಮಲ್ಲೇಶಪ್ಪ, ಶ್ರೀ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್‌. ತಾರಾನಾಥ್‌, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎನ್‌.ಸಜ್ಜನ್‌, ಮಾಜಿ ಶಾಸಕ ಎಚ್‌.ಎಂ. ಚಂದ್ರಶೇಖರಪ್ಪ, ಮಹಾನಗರ ಪಾಲಿಕೆ ಸದಸ್ಯ ಆಶಾ ಚಂದ್ರಪ್ಪ, ಯೋಗೇಶ್‌, ಅನಿತಾ ರವಿಶಂಕರ್‌, ಡಾ. ಧನಂಜಯ್‌ ಸರ್ಜಿ ಹಾಜರಿದ್ದರು.

Latest Videos
Follow Us:
Download App:
  • android
  • ios