Asianet Suvarna News Asianet Suvarna News

ಯಾದಗಿರಿ: ಪ್ರಚೋದನಕಾರಿ ಭಾಷಣ, ಆಂದೋಲಾ ಶ್ರೀ ವಿರುದ್ಧ ಪ್ರಕರಣ ದಾಖಲು

ಶಹಾಪುರದಲ್ಲಿ ಅಕ್ಟೋಬರ್ 3 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ನಡೆದಿತ್ತು. ಆಗ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಪ್ರಚೋದನೆ ಭಾಷಣ ಮಾಡಿದ್ದ ಆಂದೋಲಾಶ್ರೀ, ಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯಧರ್ಮೀಯರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು ಎಂಬ ಆರೋಪದಡಿ ಈ ಪ್ರಕರಣ ದಾಖಲು. 

Case Against Andola Swamiji for Provocative speech at Shahapura in Yadgir grg
Author
First Published Oct 7, 2023, 10:30 PM IST

ಯಾದಗಿರಿ(ಅ.07): ಶಹಾಪುರದಲ್ಲಿ ಅ.3ರಂದು ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಜೇವರ್ಗಿಯ ಆಂದೋಲಾ ಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಹಾಪುರದಲ್ಲಿ ಅಕ್ಟೋಬರ್ 3 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ನಡೆದಿತ್ತು. ಆಗ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಪ್ರಚೋದನೆ ಭಾಷಣ ಮಾಡಿದ್ದ ಆಂದೋಲಾಶ್ರೀ, ಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯಧರ್ಮೀಯರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು ಎಂಬ ಆರೋಪದಡಿ ಈ ಪ್ರಕರಣ ದಾಖಲಾಗಿದೆ.

ಯಾದಗಿರಿ: ಶ್ರೀಗಂಧ ಕಳುವು ಮರೆಮಾಚಲು ಹೊಸ ಮರ ಕಡಿದು ತಂದಿಟ್ಟ ಖದೀಮರು..!

ಈ ಮಧ್ಯೆ, ಸತ್ಯ ನುಡಿದ ಆಂದೋಲಾ ಶ್ರೀಗಳ ವಿರುದ್ಧ ಶಹಾಪುರ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸಿ, ವಾಕ್ ಸ್ವಾತಂತ್ರ‍್ಯ ಕಸಿದುಕೊಳ್ಳುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಕಲ್ಯಾಣ ಕರ್ನಾಟಕ ಅಧ್ಯಕ್ಷ ವಿಜಯ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios