* ಎಚ್‌.ವಿಶ್ವನಾಥ್‌ ಅವರ ಪುತ್ರ, ಅಮಿತ್‌ ದೇವರಹಟ್ಟಿ* ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು* ಪ್ರತಿ ದೂರು ನೀಡಿದ ಅಮಿತ್‌ 

ಮೈಸೂರು(ಮೇ.28): ನಕಲಿ ದಾಖಲೆ ಸೃಷ್ಟಿಸಿ ಖಾಲಿ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ ಕೊಲೆ ಬೆದರಿಕೆ ಹಾಕಿದ ಅರೋಪದ ಮೇರೆಗೆ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರ ಪುತ್ರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಅಮಿತ್‌

ದೇವರಹಟ್ಟಿ ಸೇರಿದಂತೆ 8 ಮಂದಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಂದಿದ್ದಕ್ಕೆ ವ್ಯಥೆ : ಬಿಜೆಪಿ ಮುಖಂಡ

ಹಿನಕಲ್‌ನ ಯೋಗೇಶ್‌ ಕುಮಾರ್‌, ಅಮಿತ್‌ ಮತ್ತು ಇತರರು ನಮ್ಮ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್‌ ನಿರ್ಮಿಸುತ್ತಿದ್ದು, ತಡೆಯಲು ಬಂದ ನನ್ನನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.