ಚಿಕ್ಕಮಗಳೂರು ಡಿಸಿ ಕಚೇರಿ ಬಳಿ ಹೋಮ ಮಾಡಿ ಮುತ್ತಿಗೆ ಹಾಕಿದ್ದ ಹಿಂದೂ ಕಾರ್ಯಕರ್ತರ ಮೇಲೆ ಕೇಸ್
ಜಿಲ್ಲಾಧಿಕಾರಿ ಕಚೇರಿ ಬಳಿ ಹೋಮ ಮಾಡಿ ಕಛೇರಿಗೆ ಮುತ್ತಿಗೆ ಹಾಕಿದ್ದ ಐದಕ್ಕೂ ಹೆಚ್ಚು ಇಂದು ಕಾರ್ಯಕರ್ತರ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಕಲಂ 353 ಹಾಗೂ 341 ಅಡಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಜ.23): ಜಿಲ್ಲಾಧಿಕಾರಿ ಕಚೇರಿ ಬಳಿ ಹೋಮ ಮಾಡಿ ಕಛೇರಿಗೆ ಮುತ್ತಿಗೆ ಹಾಕಿದ್ದ ಐದಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಪಿಸಿ ಕಲಂ 353 ಹಾಗೂ 341 ಅಡಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಐವರು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ:
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ದತ್ತಪೀಠದ ಹೋಮ ಮಂಟಪದಲ್ಲಿ ರಾಮ ತಾರಕ ಹೋಮ ಹವನ ಮಾಡಲು ಹಿಂದೂ ಸಂಘಟನೆಗಳು ಮುಂದಾಗಿದ್ದವು. ನಿನ್ನೆ ಅಯೋಧ್ಯೆಯಲ್ಲಿ ರಾಮಮಂದಿರ ಪುನರ್ ಪ್ರತಿಷ್ಠಾಪನ ವೇಳೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠದ ಯಾಗ ಶಾಲೆಯಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ರಾಮ ತಾರಕ ಹೋಮ ಮಾಡಲು ಸಿದ್ಧತೆ ನಡೆಸಿದ್ದರು.
ಸಿದ್ದರಾಮಯ್ಯ ಕೊಡಗಿಗೆ, ಅಯೋಧ್ಯೆ ಸಂಭ್ರಮಕ್ಕೆ ಹಾಕಿದ್ದ ಫ್ಲೆಕ್ಸ್ ತೆರವಿಗೆ ವಿರಾಜಪೇಟೆ ಪುರಸಭೆಯಿಂದ ನೊಟೀಸ್
ಆದರೆ, ಜಿಲ್ಲಾಡಳಿತ ದತ್ತಪೀಠದ ಯಾಗ ಶಾಲೆಯಲ್ಲಿ ಹೋಮ ಮಾಡಲು ಅವಕಾಶ ನೀಡದೆ ಯಾಗ ಶಾಲೆಗೆ ಬೀಗ ಹಾಕಿತ್ತು. ಇದರಿಂದ ಸಿಟ್ಟಾದ ಹಿಂದೂ ಸಂಘಟನೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಈ ವೇಳೆ ಇಂದು ಸಂಘಟನೆ ಕಾರ್ಯಕರ್ತರು ದತ್ತಪೀಠದಲ್ಲಿ ಹೋಮ ನಡೆಸಲು ಅನುಮತಿ ಕೇಳಿದರು ಜಿಲ್ಲಾಧಿಕಾರಿ ಅನುಮತಿ ನೀಡಲು ನಿರಾಕರಿಸಿದರು. ಇದರಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೋಮ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು.
ಡಿಸಿ ಕಚೇರಿ ಮುಂದೆಯೇ ಕರ್ಪೂರ ಹಚ್ಚಿ, ಶ್ರೀರಾಮನಿಗೆ ಹೋಮ ಹವನ ಮಾಡಿ, ರಾಮ ನಾಮ ಜಪ ಮಾಡಿದ್ದರು. ಅಷ್ಟೇ ಅಲ್ಲದೆ ಹೋಮಕುಂಡವನ್ನು ತಂದು ಹೋಮ ಮಾಡಲು ಮುಂದಾದಾಗ ಪೊಲೀಸರು ಹೋಮಕುಂಡವನ್ನು ವಶಕ್ಕೆ ಪಡೆದುಕೊಂಡರು. ಇದಾದ ಬಳಿಕ ಡಿಸಿ ಕಚೇರಿಗೆ ನುಗ್ಗಲು ಯತ್ನ ನಡೆದವು. ಈ ವೇಳೆ ಓರ್ವ ಕಾರ್ಯಕರ್ತ ಪೊಲೀಸ್ ವಾಹನಕ್ಕೆ ಅಡ್ಡಲಾಗಿ ಮಲಗಿದ್ದರು.
ಅಯೋಧ್ಯೆಗೆ ಗೈರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಪತ್ರಕ್ಕೆ ಪ್ರತಿಕ್ರಿಯಿಸಿ ಲೆಟರ್ ಬರೆದ ಪ್ರಧಾನಿ ಮೋದಿ
ಐದಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಕೇಸ್ :
ಎಸಿಯವರ ದೂರಿನ ಅನ್ವಯ ನಗರ ಠಾಣೆಯಲ್ಲಿ ಐದಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಮೇಲೆ ಐ.ಪಿ.ಸಿ. ಸೆಕ್ಷನ್ ಕಲಂ 353, 341 ರ ಅಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಚಿಕ್ಕಮಗಳೂರು ಡಿ.ವೈ.ಎಸ್.ಪಿ ಶೈಲೇಂದ್ರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.