ಉಡುಪಿ(ಮಾ.05): ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಡುಪಿ ಹೆಬ್ರಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಘಟನೆಯಲ್ಲಿ ಪ್ರಾಂಶುಪಾಲರು ಸೇರಿ ನಾಲ್ವರು ಶಿಕ್ಷಕರ ಮೇಲೆ ಕೇಸು ದಾಖಲಾಗಿದ್ದು, ಕಾಲೇಜು ಆವರಣದಲ್ಲಿ ಸಹಪಾಠಿಗಳು ಮೌನ ಪ್ರಾರ್ಥನೆ ಮಾಡಿದ್ದಾರೆ.

ಸರಕಾರಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಪ್ರಕರಣದಲ್ಲಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಚರಣ್ ಶೆಟ್ಟಿ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಹೆಬ್ರಿ ಕಾಲೇಜಿನಲ್ಲಿ ಪ್ರಥಮ‌ ಬಿಕಾಂ ಕಲಿಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸಹಪಾಠಿಗಳು ಕಾಲೇಜು ಆವರಣದಲ್ಲಿ ಮೌನ ಪ್ರಾರ್ಥನೆ ಮಾಡಿದ್ದಾರೆ.

ಕಾಲೇಜ್‌ ಡೇ ದಿನ ಮದ್ಯ ಸೇವನೆ: ಡಿಗ್ರಿ ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗುರುವಾರ ಕಾಲೇಜಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಕರು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದು, ಪ್ರಾಂಶುಪಾಲರು ಸೇರಿ ನಾಲ್ವರು ಶಿಕ್ಷಕರ ಮೇಲೆ ಕೇಸು ದಾಖಲಿಸಲಾಗಿದೆ.

ಕಾಲೇಜು ಡೇ ದಿನ ಮದ್ಯ ಸೇವಿಸಿ ಗಲಾಟೆ ಮಾಡಿದ್ದ ಚರಣ್ ಶೆಟ್ಟಿಯನ್ನು ಶಿಕ್ಷಕರು ತರಾಟೆಗೆ ತೆಗೆದುಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಗೆಳೆಯರಿಗೆ ಕರೆ ಮಾಡಿದ್ದ ಚರಣ್ ಆತ್ಮಹತ್ಯೆಗೆ ಶರಣಾಗಿದ್ದ. ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.