* ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ನಡೆದಿದ್ದ ಧರಣಿ* ಧರಣಿ ವೇಳೆ ನಿಷೇದಾಜ್ಞೆ, ಕೊರೋನಾ ನಿಯಮ ಉಲ್ಲಂಘನೆ* ಕಾಂಗ್ರೆಸ್‌ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ ಮತ್ತಿತರರ ವಿರುದ್ಧ ಕೇಸ್‌  

ಚಿತ್ರದುರ್ಗ(ಜೂ.13): ಕೋವಿಡ್‌ ನಿಯಮ ಉಲ್ಲಂಘಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಧರಣಿ ಹಿನ್ನೆಲೆಯಲ್ಲಿ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ ಮತ್ತಿತರರ ವಿರುದ್ಧ ಕೇಸ್‌ ದಾಖಲಾಗಿದೆ.

ಇಂದು(ಭಾನುವಾರ) ನಗರದಲ್ಲಿ ಮಾಹಿತಿ ನೀಡಿದ ಎಸ್‌ಪಿ ಜಿ.ರಾಧಿಕಾ ಅವರು, ನಿನ್ನೆ(ಶನಿವಾರ) ಜಿಲ್ಲೆಯ ಹಿರಿಯೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಕೋವಿಡ್‌ ನಿಯಮ ಉಲ್ಲಂಘಿಸಲಾಗಿತ್ತು ಎಂದು ಹೇಳಿದ್ದಾರೆ. 

ಚಿತ್ರದುರ್ಗ: ಲಾಕ್‌ಡೌನ್ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೂಗರು

ಧರಣಿ ವೇಳೆ ನಿಷೇದಾಜ್ಞೆ, ಕೊರೋನಾ ನಿಯಮ ಉಲ್ಲಂಘಿಸಿ ದೈಹಿಕ ಅಂತರ ಮರೆತು ನೂರಾರು ಜನರು ಜಮಾಯಿಸಿದ್ದರು. ಹೀಗಾಗಿ ಕಾಂಗ್ರೆಸ್‌ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ ಮತ್ತಿತರರ ವಿರುದ್ಧ ಕೇಸ್‌ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.