ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಕೊರೋನಾ ಸೋಂಕಿತ| ತೋಟದ ಮನೆಗೆ ತಂದು ಅಂತ್ಯಕ್ರಿಯೆ| ಅಧಿಕ ಜನರನ್ನು ಸೇರಿಸಿ ಕುಟುಂಬಸ್ಥರಿಂದ ಅಂತ್ಯಸಂಸ್ಕಾರ| ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದಲ್ಲಿ ನಡೆದ ಘಟನೆ| 

ಬಾಗಲಕೋಟೆ(ಮೇ.01): ಕೊರೋನಾ ಸೋಂಕಿಗೆ ಮೃತಪಟ್ಟ ರೋಗಿಯೊಬ್ಬರ ಶವಕ್ಕೆ ಕೋವಿಡ್‌ ನಿಯಮ ಉಲ್ಲಂಘಿಸಿ 100ರಿಂದ 150 ಜನರನ್ನು ಸೇರಿಸಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

Add Asianetnews Kannada as a Preferred SourcegooglePreferred

ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಸೋಂಕಿತರೊಬ್ಬರು ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದರು. ಅವರ ಕುಟುಂಬಸ್ಥರು ಶವವನ್ನು ತಮ್ಮ ತೋಟದ ಮನೆಗೆ ತಂದು ಅಂತ್ಯಕ್ರಿಯೆ ನಡೆಸಿದ್ದಾರೆ.

"

ಹಾಸಿಗೆ ಸಿಗದೆ ಸಾವು, ಬಾಗಲಕೋಟೆಯಲ್ಲೂ ಅದೇ ಹಣೇಬರಹ

ನಿಯಮಾವಳಿ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದ್ದರೂ ಅಧಿಕ ಜನರನ್ನು ಸೇರಿಸಿ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಲಾಗಿದ್ದು ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona