ಮಂಗಳೂರು(ಏ.23): ಕೊರೋನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಲ್ಲೆ ಮಾಡಿದವರ ಮೇಲೆ ಗೂಂಡಾ ಕೇಸ್‌ ಹಾಕಿ ಜೈಲಿಗಟ್ಟಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವತಿಯಿಂದ ಪತ್ರಕರ್ತರಿಗೆ ನೀಡಲಾದ ದಿನಸಿ ಕಿಟ್‌ಗಳ ಹಸ್ತಾಂತರ ಮಾಡಿ ಅವರು ಮಾತನಾಡಿದರು.

ಗರ್ಭಿಣಿಯರಿಗೆ, 5 ವರ್ಷದೊಳಗಿನ ಮಕ್ಕಳಿಗೆ ಇಂದಿನಿಂದ ಚುಚ್ಚುಮದ್ದು

ಪೊಲೀಸರಿಗೆ ಲಾಠಿ ರಿವಾಲ್ವರ್‌ ಕೊಟ್ಟಿರುವುದು, ಪ್ರದರ್ಶನಕ್ಕೆ ಅಲ್ಲ, ಜೀವರಕ್ಷಣೆಗಾಗಿ. ಆದರೆ ಅವರ ಮೇಲೆಯೇ ಹಲ್ಲೆ ನಡೆಯುವುದನ್ನು ಸಹಿಸಲಾಗದು. ಕೊರೋನಾ ತಪಾಸಣೆಗೆ ಹೋದವರ ಮೇಲೆ ಹಲ್ಲೆಗೆ ಯಾರಾದರೂ ಮುಂದಾದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಲಾಕ್‌ಡೌನ್‌ ಸಂಕಷ್ಟ: 3000 ಕೋಳಿ ದಫನ ಮಾಡಿದ ಕುಕ್ಕುಟೋದ್ಯಮಿ ಆತ್ಮಹತ್ಯೆ

ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ, ಡಾ. ರಾಜೇಂದ್ರ ಕುಮಾರ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿಇದ್ದರು. ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ಹರೀಶ್‌ ರೈ ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್‌ ವಂದಿಸಿದರು.

ಪತ್ರಕರ್ತರ ಕೋವಿಡ್‌ ತಪಾಸಣೆಗೆ ಸಮ್ಮತಿ:

ರಾಜ್ಯ ವಾರ್ತಾ ಇಲಾಖೆಯ ನಿರ್ದೇಶನ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಮನವಿ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಪತ್ರಕರ್ತರ ಕೋವಿಡ್‌-19 ತಪಾಸಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.