ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಗ್ರಾಮದ ಬಳಿ ನಡೆದ ಘಟನೆ. ಶಾರ್ಟ್ ಸರ್ಕ್ಯೂಟ್‌ ಆಗಿ ಖಾಸಗಿ ಶಾಲೆಯ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ. 

ವಿಜಯನಗರ(ಜೂ.15):  ಶಾಲಾ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಗ್ರಾಮದ ಬಳಿ ಇಂದು(ಗುರುವಾರ) ನಡೆದಿದೆ. ಆದರೆ, ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲ ಮಕ್ಕಳು ಸೇಫ್ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾರ್ಟ್ ಸರ್ಕ್ಯೂಟ್‌ ಆಗಿ ಖಾಸಗಿ ಶಾಲೆಯ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹೊಗೆ ಕಾಣಿಸಿಕೊಂಡಾಗ ಚಾಲಕ, ಸಿಬ್ಬಂದಿ ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ್ದಾರೆ. ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪ್ರಾಣಾಪಾಯವಿಲ್ಲ ಅಂತ ತಿಳಿದು ಬಂದಿದೆ.

ಧಾರವಾಡ ಬೈಪಾಸ್‌ನಲ್ಲಿ ಭೀಕರ ಅಪಘಾತ, ಬಿಂದುಗೌಡ ಸೇರಿ ಮೂವರ ಸಾವು

ಅಗ್ನಿ ಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಕೊಟ್ಟೂರು ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.