Asianet Suvarna News Asianet Suvarna News

ಕಾವೇರಿ ಹೋರಾಟ: ನಾಳೆ ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ

ಬೆಂಗಳೂರು ಬಂದ್‌ ವೇಳೆ ಶಾಲಾ ಮಕ್ಕಳಿಗೆ ಸಮಸ್ಯೆ ಆಗುವುದನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲ ಶಾಲೆಗಳಿಗೆ ಜಿಲ್ಲಾಧಿಕಾರಿ ದಯಾನಂದ್‌ ರಜೆಯನ್ನು ಘೋಷಣೆ ಮಾಡಿದ್ದಾರೆ.

Cauvery Protest Holiday announced for schools on September 25th due to Bengaluru bandh sat
Author
First Published Sep 25, 2023, 6:46 PM IST

ಬೆಂಗಳೂರು (ಸೆ.25): ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ರೈತರು ಹಾಗೂ ವಿವಿಧ ಸಂಘಟನೆಗಳಿಂದ ಹಮ್ಮಿಕೊಂಡಿರುವ ಕರ್ನಾಟಕದ ಬಂದ್‌ ಹಾಗೂ ಬೆಂಗಳೂರು ಬಂದ್‌ ವೇಳೆ ಶಾಲಾ ಮಕ್ಕಳಿಗೆ ಸಮಸ್ಯೆ ಆಗುವುದನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರದ ಎಲ್ಲ ಶಾಲೆಗಳಿಗೆ ಜಿಲ್ಲಾಧಿಕಾರಿ ದಯಾನಂದ್‌ ರಜೆಯನ್ನು ಘೋಷಣೆ ಮಾಡಿದ್ದಾರೆ.

ಈ ಕುರಿತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿರುವ ಜಿಲ್ಲಾಧಿಕಾರಿ ದಯಾನಂದ್‌ ಅವರು, ನಾಳೆ ಬೆಂಗಳೂರು ಬಂದ್  ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲು ಶಿಫಾರಸ್ಸು ಮಾಡಿದ್ದರಿಂದ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಬೆಂಗಳೂರು ನಗರದಾದ್ಯಂತ ಎಲ್ಲ ಖಾಸಗಿ ಶಾಲೆಗಳು ಬಂದ್‌ ಆಗಲಿವೆ. ಇನ್ನು ಈಗಾಗಲೇ ಹಲವು ಖಾಸಗಿ ಕಾಲೇಜುಗಳು ಮಕ್ಕಳ ಕಾಳಜಿಯ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಣೆ ಮಾಡಿದ್ದವು. ಈಗ ಶಿಕ್ಷಣ ಇಲಾಖೆಯಿಂದಲೇ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕಾವೇರಿ ಹೋರಾಟಕ್ಕೆ ಬಾರದ ನಟ-ನಟಿಯರ ಚಿತ್ರಗಳನ್ನು ಬಹಿಷ್ಕರಿಸಿ: ಶಾಸಕ ಯತ್ನಾಳ್‌ ಒತ್ತಾಯ

ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ: ನಾಳೆ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು‌ ಮುಂದೂಡಿಕೆ ಮಾಡಲಾಗಿದೆ. ಪದವಿಯ 2ನೇ ಹಾಗೂ 4 ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ನಾಳೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಸೆ.27ರಂದು ನಿಗದಿಗೊಳಿಸಿ ಮುಂದೂಡಿಕೆ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಇನ್ನು ಇದರಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗೆ ಉಂಟಾಗಿದ್ದ ಗೊಂದಲಕ್ಕೆ ವಿವಿ ಆದೇಶವನ್ನು ಹೊರಡಿಸಿದೆ. 

ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದ ರುಪ್ಸಾ: ನಾಳೆ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ರುಪ್ಸಾ ಸಂಘಟನೆಯಿಂದ ರಜೆ ಘೋಷಣೆ ‌ಮಾಡಲಾಗಿದೆ. ನಾಳೆ ನಗರದ ‌ಬಹುತೇಕ‌ ಖಾಸಗಿ ಶಾಲೆಗಳಿಗೆ ರಜೆ ಕೊಟ್ಟಿವೆ ಎಂದು ಖಾಸಗಿ ಶಾಲೆಗಳ ಮಾಲೀಕರ ಒಕ್ಕೂಟದಿಂದ ತಿಳಿಸಿದೆ. ಇನ್ನು ಖಾಸಗಿ ಬಸ್‌ಗಳ ಮಾಲೀಕರಿಂದಲೂ ಬೆಂಗಳೂರು ಬಂದ್‌ಗೆ ಬೆಂಬ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ನಾಳೆ ಖಾಸಗಿ ಬಸ್​ಗಳು ರಸ್ತೆಗಿಳಿಯುವುದಿಲ್ಲ. ನ್ಯಾಷನಲ್ ಕಾಲೇಜಿನಿಂದ ಟೌನ್ ಹೌಲ್​ವರೆಗೆ ರ್ಯಾಲಿ ನಡೆಸುತ್ತೇವೆ. ಎರಡು ಸಾವಿರಕ್ಕೂ ಹೆಚ್ಚು ಚಾಲಕರು ಬಂದ್​ನಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕೆಆರ್‌ಎಸ್‌ ಜಲಾಶಯ ಪರಿಶೀಲಿಸಿ ಕೇಂದ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿ: ಮಾಜಿ ಪ್ರಧಾನಿ ದೇವೇಗೌಡರ ಆಗ್ರಹ

ಒತ್ತಾಯಪೂರ್ವಕ ಬಂದ್‌ ಮಾಡಿಸಿದರೆ ಕ್ರಮ: ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾತನಾಡಿ, ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಇದೆ. ಸುಪ್ರಿಂ ಕೋರ್ಟ್ ಆದೇಶದಂತೆ ಯಾವುದೇ ಬಂದ್ ಗೆ ಅವಕಾಶ ಇಲ್ಲ. ಬಂದ್ ನಲ್ಲಿ ಆಸ್ತಿ ಪಾಸ್ತಿ ನಷ್ಟ್ ಆದ್ರೆ ಆಯೋಜಕರೆ ಹೊಣೆ ಎಂಬ ಸೂಚನೆ ಇದೆ. ನಾಳೆ ಬಂದ್ ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಾಳೆ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ. ಒತ್ತಾಯ ಪೂರ್ವಕ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಕಡೆ ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ. ಹೊರಗಡೆಯಿಂದಲೂ ಅಧಿಕಾರಿಗಳು, ಸಿಬ್ಬಂದಿ ಕರೆಸಿಕೊಳ್ಳುತ್ತೇವೆ. ಗಣೇಶ ಉತ್ಸವಕ್ಕೆ ಹೊರಗಡೆಯಿಂದ ಸಾಕಷ್ಟು ಪೊಲೀಸರು ಬಂದಿದ್ದರು.. ಅವರು ಕಂಟಿನ್ಯೂ ಆಗ್ತಾರೆ ಎಂದು ಹೇಳಿದರು.

Follow Us:
Download App:
  • android
  • ios