Asianet Suvarna News Asianet Suvarna News

ಬೆಳಗಾವಿ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ದಾಳಿ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ದಂಡುಮಂಡಳಿ ಕಚೇರಿ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಸಿಇಒ ಕೆ.ಆನಂದ ಸೇರಿ ಹಿರಿಯ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಂಗಳೂರು, ದೆಹಲಿಯ ಸಿಬಿಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ದಂಡುಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಅಭ್ಯರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು.

CBI Raid on Belagavi Cantonment Board Office grg
Author
First Published Nov 19, 2023, 12:00 AM IST

ಬೆಳಗಾವಿ(ನ.19):  ಬೆಳಗಾವಿ ದಂಡುಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಶನಿವಾರ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ನಗರದ ಕ್ಯಾಂಪ್ ಪ್ರದೇಶದಲ್ಲಿರುವ ದಂಡುಮಂಡಳಿ ಕಚೇರಿ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಸಿಇಒ ಕೆ.ಆನಂದ ಸೇರಿ ಹಿರಿಯ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಂಗಳೂರು, ದೆಹಲಿಯ ಸಿಬಿಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ದಂಡುಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಅಭ್ಯರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು.

ಗದಗ: ಶೌಚಾಲಯದ ಗೋಡೆಗೆ ಡಿಕ್ಕಿ ಹೊಡೆದ ಕಾರು, ಮೂವರ ದುರ್ಮರಣ

ಬೆಳಗಾವಿ ದಂಡುಮಂಡಳಿ ಕಚೇರಿಯಲ್ಲಿ ಕಳೆದ 10 ವರ್ಷಗಳಿಂದ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹಲವಾರು ಬಾರಿ ದೂರು ನೀಡಿದ್ದರೂ ಈವರೆಗೆ ಯಾರೂ ಕ್ರಮ ಕೈಗೊಂಡಿರಲಿಲ್ಲ ಎಂದು ಕ್ಲೇಟನ್‌ ಕೊಯ್ಲಿಲೋ ಆರೋಪಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಂಡುಮಂಡಳಿಯಲ್ಲಿ ನಡೆದ ಅಕ್ರಮ ನೇಮಕಾತಿ ಕುರಿತು ಕ್ಯಾಂಪ್‌ ಠಾಣೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ದಂಡುಮಂಡಳಿ ವ್ಯಾಪ್ತಿಯಲ್ಲಿ ನಡೆದ ಕಟ್ಟಡ ನಿರ್ಮಾಣದಲ್ಲಿಯೂ ಅಕ್ರಮ ಎಸಗಲಾಗಿದೆ. ನಾನು ಟ್ವೀಟರ್‌ ಮೂಲಕ ನೀಡಿದ ದೂರಿನ ಮೇರೆಗೆ ಸಿಬಿಐ ದಂಡುಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದೆ. ದಂಡುಮಂಡಳಿಯ ಎಲ್ಲ ಅವ್ಯವಹಾರ ಕುರಿತು ಸಂಪೂರ್ಣ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Follow Us:
Download App:
  • android
  • ios