ಗದಗ (ಸೆ.16): ನಮ್ಮ ಜಿಲ್ಲೆಯ ಹಿರಿಯ ನಾಯಕರಾದ ಎಚ್.ಕೆ. ಪಾಟೀಲರಿಗೆ ವಿರೋಧ ಪಕ್ಷದ ಸ್ಥಾನ ಸಿಗುತ್ತದೆ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಅವರಿಗೆ ವಿಧಾನಸಭೆ ವಿರೋಧ ಪಕ್ಷದ ಸ್ಥಾನ ಸಿಗಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಗದಗ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ‘ಚಕ್ರವರ್ತಿ’ ದಿನಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಚ್.ಕೆ. ಪಾಟೀಲ್ ಅವರಿಂದ ನಮ್ಮ ಸರ್ಕಾರಕ್ಕೆ ಇನ್ನಷ್ಟು ಸಕಾರಾತ್ಮಕ ಟೀಕೆಗಳು ಕೇಳಿ ಬರಲಿ ಎಂದು ಆಶಿಸುತ್ತೇನೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಮೂಲಕ ಬಹಿರಂಗವಾಗಿಯೇ ಅವರಿಗೆ ಶುಭಾಶಯ ತಿಳಿಸಿ, ನಿಮ್ಮ ಟೀಕೆಗಳನ್ನು ಎದುರಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮಾರ್ಮಿಕವಾಗಿ ಹೇಳಿದರು.