ಬೆಂಗಳೂರು, [ಜೂನ್.08]: ಬೆಂಗಳೂರಿನ ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕೋಟ್ಯಾನ್ [47] ಹಾಗೂ ಕರಣ್ ಬಂಧಿತ ಆರೋಪಿಗಳು. ಹೊರ ರಾಜ್ಯದಿಂದ ಹುಡುಗಿಯರನ್ನು ಕರೆತಂದು ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. 

ಆನ್ ಲೈನ್ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ ದಂಧೆ ನಡೆಸುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಶುಕ್ರವಾರ ರಾತ್ರಿ ಅಮಾರ್ಟ್ ಮೆಂಟ್ ಮೇಲೆ ದಾಳಿ ಮಾಡಿದ್ದು, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.