'ಕಾಂಗ್ರೆಸ್‌ನಲ್ಲಿ ಡಿಕೆಶಿ ಇರಲು ಯೋಗ್ಯತೆ ಇಲ್ಲ - ಕೂಡಲೇ ರಾಜೀನಾಮೆ ನೀಡಲಿ'

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ ಮುಂದುವರಿಯುವ ಯೋಗ್ಯತೆ ಇಲ್ಲ. ಅವರು ತಕ್ಷಣ ರಾಜೀನಾಮೆ ನೀಡಲಿ ಎಂದು ಅಸಮಾಧಾನ ಹೊರಹಾಕಲಾಗಿದೆ. 

CD Case protest Against DK Shivakumar in Tumakuru  snr

 ತುಮಕೂರು (ಮಾ.29): ಮಾಜಿ ಸಚಿವ ರಮೇಶ್‌ ಜಾರಕಿ ಹೊಳಿ ಅವರ ವಿರುದ್ಧ ಷಡ್ಯಂತ್ರ ನಡೆಸಿ ಸಿ.ಡಿ. ಗ್ರಾಫಿಕ್‌ ಮಾಡಿ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ಸಮುದಾಯ ಹಾಗೂ ರಮೇಶ್‌ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಟೌನ್‌ಹಾಲ್‌ ವೃತ್ತದಲ್ಲಿ ಜಮಾಯಿಸಿ ವಾಲ್ಮೀಕಿ ಸಮುದಾಯದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಘೋಷಣೆಗಳನ್ನು ಕೂಗಿ ಕೂಡಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ವಾಲ್ಮೀಕಿ ಸಮುದಾಯದ ಮಾರಣ್ಣ ಪಾಳೇಗಾರ್‌, ಡಿ.ಕೆ. ಶಿವಕುಮಾರ್‌ ಸಿ.ಡಿ. ತಯಾರಿಸುವ ಫ್ಯಾಕ್ಟರಿ ಇಟ್ಟುಕೊಂಡು ತಳ ಸಮುದಾಯಗಳನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ರಾಜಕೀಯದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ. ಅಲ್ಲದೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯುವ ಯೋಗ್ಯತೆ ಇಲ್ಲ. ತಕ್ಷಣ ಇವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು ಎಂದು ಒತ್ತಾಯಿಸಿದರು.

ಇತ್ತಅವರ ಗೆಲುವಿಗೆ ಡಿಕೆಶಿ ಪಣ : ಅತ್ತ ಡಿಕೆಶಿ ಬಂದರೂ ಬಾರದ ಸತೀಶ್ .

ನಾಪತ್ತೆ ಮಾಡಿರುವ ಹೆಣ್ಣು ಮಗಳನ್ನು ತಕ್ಷಣ ಕರೆದುಕೊಂಡು ಬಿಡಬೇಕು. ಡಿ.ಕೆ. ಶಿವಕುಮಾರ್‌ ಅವರು ಹೆಣ್ಣು ಮಗಳ ಕುಟುಂಬಕ್ಕೆ ಮತ್ತು ಸಮಾಜಕ್ಕೆ ದ್ರೋಹ ಮಾಡಿದ್ದಾರೆ. ಹಾಗಾಗಿ ಇವರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ಮುಂದುವರೆಯುವ ಅರ್ಹತೆ, ಯೋಗ್ಯತೆ ಇಲ್ಲ. ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ಕುಪ್ಪೂರು ಶ್ರೀಧರ್‌ ನಾಯಕ್‌ ಮಾತನಾಡಿ, ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಇರಲು ನಾಲಾಯಕ್‌. ಇವರು ರಮೇಶ್‌ ಜಾರಕಿಹೊಳಿ ಅವರೊಬ್ಬರಿಗಷ್ಟೇ ಅಲ್ಲ, ಇಡೀ ನಾಯಕ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಾಲ್ಮೀಕಿ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ಕುಪ್ಪೂರು ಶ್ರೀಧರ್‌ ನಾಯಕ್‌ ಬಸವರಾಜು, ರಾಕೇಶ್‌, ದಯಾನಂದ್‌, ಕುಪ್ಪೂರು ಶ್ರೀಧರ್‌, ಮಾರಣ್ಣ ಪಾಳೇಗಾರ್‌, ಹಾಗಲವಾಡಿ ಶಂಕರ್‌, ಗುಡ್ಡದ ರಂಗಪ್ಪ, ಕೆಸ್ತೂರು ರವಿ, ಹೆಬ್ಬಾಕ ಮೂರ್ತಿ, ಅನಿಲ್‌ ಊರುಕೆರೆ, ನಾಗರಾಜು ಮತ್ತಿತರರು ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios