ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ: ಡೀಸಿ

ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಯೊಂದಿಗೆ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ತದನಂತರ ಗೌರಿ, ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ ವತಿಯಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ವಿಸರ್ಜಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಮನವಿ ಮಾಡಿದ್ದಾರೆ.

Celebrate Eco-Friendly Gauri-Ganesha Festival: DC snr

 ತುಮಕೂರು :  ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಯೊಂದಿಗೆ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ತದನಂತರ ಗೌರಿ, ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ ವತಿಯಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ವಿಸರ್ಜಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌  ಮತ್ತು

ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ / ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದಾಗಿ

ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ

ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ಜಲ ಮಾಲಿನ್ಯ

(ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, ಪ್ರಕಾರ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಮತ್ತು ಬಣ್ಣ

ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ / ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಮಾಡಬಾರದೆಂದು ಜಿಲ್ಲಾಧಿಕಾರಿಗಳು ಮನÜವಿ ಮಾಡಿದ್ದಾರೆ.

Latest Videos
Follow Us:
Download App:
  • android
  • ios