ಉಪಚುನಾವಣೆ: ಮತಗಟ್ಟೆ ಹೆಚ್ಚಳಕ್ಕೆ ಆಯೋಗ ಒಪ್ಪಿಗೆ
ಮತಗಟ್ಟೆಗಳ ಸಂಖ್ಯೆ ಹೆಚ್ಚಿಸುವ ಸಂಬಂಧ ಸಲ್ಲಿಸಿದ ಪ್ರಸ್ತಾವನೆಗೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ| ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 381 ಮತಗಟ್ಟೆ| ಒಂದು ಸಾವಿರ ಮತದಾರರಿಗಿಂತ ಹೆಚ್ಚಿರುವ 307 ಮತಗಟ್ಟೆ| ಮತಗಟ್ಟೆಗಳ ಸಂಖ್ಯೆ 678ಕ್ಕೆ ಹೆಚ್ಚಳ|
ಬೆಂಗಳೂರು(ಅ.15): ಕೊರೋನಾ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತಗಟ್ಟೆಗಳ ಸಂಖ್ಯೆಯನ್ನು 678ಕ್ಕೆ ಹೆಚ್ಚಿಸುವ ಸಂಬಂಧ ಸಲ್ಲಿಸಿದ ಪ್ರಸ್ತಾವನೆಗೆ ಕೇಂದ್ರ ಚುನಾವಣಾ ಆಯೋಗ ಅನುಮೋದನೆ ನೀಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಆರ್.ಆರ್.ನಗರ ಕ್ಷೇತ್ರದಲ್ಲಿ ಒಟ್ಟು 381 ಮತಗಟ್ಟೆಗಳಿವೆ. ಒಂದು ಸಾವಿರ ಮತದಾರರಿಗಿಂತ ಹೆಚ್ಚಿರುವ 307 ಮತಗಟ್ಟೆಗಳಿವೆ. ಕೋವಿಡ್ ನಿಯಮಾವಳಿ ಪ್ರಕಾರ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸಬೇಕಾದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಗಂಡನಿಗಿಂತ ಶ್ರೀಮಂತೆ
ಆಯೋಗ ಮತಗಟ್ಟೆಗಳ ಸಂಖ್ಯೆಯನ್ನು 678ಕ್ಕೆ ಹೆಚ್ಚಳ ಮಾಡುವುದಕ್ಕೆ ಅನುಮತಿ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.