ಮಂಗಳೂರು(ಜ.23): ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್‌ ಯೋಜನೆಯಾದ ಪ್ಲಾಸ್ಟಿಕ್‌ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ.

ಈ ಮೂಲಕ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಬಹುಕಾಲದ ಪ್ರಯತ್ನ ಯಶಸ್ವಿಯಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್ ಸ್ಥಾಪನೆ ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತ ಕುಮಾರ್‌, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಳಿನ್‌ ಕುಮಾರ್‌ ಕೃತಜ್ಞತೆ ಹೇಳಿದ್ದಾರೆ.

ಮಾರ್ಚ್‌ ವೇಳೆಗೆ ನೋಟು ಸ್ಥಗಿತ: ಮತ್ತೆ ಅಮಾನ್ಯೀಕರಣ..?

ಕೇಂದ್ರದ ‘ಮೇಕ್‌ ಇನ್‌ ಇಂಡಿಯಾ’ ಯೋಜನೆಯ ಅಂಗವಾಗಿರುವ ಪ್ಲಾಸ್ಟಿಕ್‌ ಪಾರ್ಕ್ ಗಂಜಿಮಠ ಪರಿಸರದಲ್ಲಿ ಅನುಷ್ಠಾನಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೆ ಕಾರಣವಾಗಲಿದೆ. ಈ ಯೋಜನೆಯಿಂದ ಲೋಕಸಭಾ ಚುನಾವಣೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರು ನೀಡಿದ ಭರವಸೆ ಈಡೇರಿದಂತಾಗಿದೆ ಹಾಗೂ ಸಂಸದರ ಸಾಧನೆಯ ಪರ್ವಕ್ಕೆ ಮತ್ತೊಂದು ಗರಿ ಬಂದಿದೆ.