Brown Rice: ದ.ಕ, ಉಡುಪಿ ಪಡಿತರದಾರರಿಗೆ ಸಂತಸದ ಸುದ್ದಿ ನೀಡಿದ ಕೇಂದ್ರ ಸರ್ಕಾರ
* ಕುಚ್ಚಲಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ
* ಬೆಂಬಲ ಬೆಲೆಯಡಿ ಖರೀದಿಗೆ ಅನುಮೋದನೆ
* ಸ್ಥಳೀಯ ತಳಿ ಅಕ್ಕಿ ಖರೀದಿ: ಕೋಟ
ಉಡುಪಿ(ಜ.09): ದಕ್ಷಿಣ ಕನ್ನಡ(Dakshina Kannada), ಉಡುಪಿ(Udupi) ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ ಸ್ಥಳೀಯ ಕಜೆ, ಜಯಾ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳ ಕುಚ್ಚಲಕ್ಕಿಯನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಿ ಪಡಿತರದ ಮೂಲಕ ಉಭಯ ಜಿಲ್ಲೆಗಳಲ್ಲಿ ವಿತರಿಸಲು ಕೇಂದ್ರ ಸರ್ಕಾರ(Central Government) ಅನುಮೋದನೆ ನೀಡಿದೆ.
ಕೇಂದ್ರ ರೈತರ(Farmers) ಮತ್ತು ಕೃಷಿ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಮತ್ತು ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ(Kota Shrinivas Poojari) ಅವರ ಪ್ರಯತ್ನದಿಂದ ಕರ್ನಾಟಕ ಸರ್ಕಾರವು(Government of Karnataka) ಈ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಗಣಿಸಿದ ಕೇಂದ್ರ ಪಡಿತರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪಿಯೂಷ್ ಗೋಯಲ್(Piyush Goyal) ಅವರು ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ಗುರುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
Ration Card ರದ್ದತಿಯಿಂದ 249 ಕೋಟಿ ರು. ಉಳಿತಾಯ
ಸ್ಥಳೀಯ ತಳಿ ಅಕ್ಕಿ ಖರೀದಿ- ಕೋಟ:
ಉಭಯ ಜಿಲ್ಲೆಗಳ ಸಂಸದರು, ಶಾಸಕರು ಅಭಿನಂದನಾರ್ಹರು. ಉಭಯ ಜಿಲ್ಲೆಗಳಿಗೆ 1 ಲಕ್ಷ ಕ್ವಿಂಟಲ್ ಅಕ್ಕಿ ಬಿಡುಗಡೆಯಾಗುತ್ತದೆ. ಅದರಲ್ಲಿ ಎಂ4, ಜಯಾ ಇತ್ಯಾದಿ ಸ್ಥಳೀಯ ತಳಿಯ ಅಕ್ಕಿಯನ್ನು ಖರೀದಿ ಮಾಡಿ ವಿನಿಯೋಗಿಸುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹೊಸ ಪಡಿತರ: 7,379 ಅರ್ಜಿ ಸಲ್ಲಿಕೆ, 7 ವಿಲೇವಾರಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೊಸದಾಗಿ ಬರೋಬ್ಬರಿ 7,379 ಕುಟುಂಬಗಳು ಹೊಸ ಪಡಿತರ ಚೀಟಿಗಾಗಿ (Ration Card) ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಗೆ ಅರ್ಜಿ ಸಲ್ಲಿಸಿದ್ದು ಆ ಪೈಕಿ 7 ಅರ್ಜಿಗಳು ಮಾತ್ರ ವಿಲೇವಾರಿ ಆಗಿದ್ದು ಇನ್ನೂ 7,372 ಅರ್ಜಿಗಳು ಆಹಾರ ಇಲಾಖೆ (Food Department) ಅಧಿಕಾರಿಗಳ ಪರಿಶೀಲನೆಗಾಗಿ ಎದುರು ನೋಡುತ್ತಿವೆ. ಹೌದು, ಆಹಾರ ಇಲಾಖೆ ಪ್ರತಿ ವರ್ಷ ಹೊಸ ಪಡಿತರ ಚೀಟಿಗಳ ವಿತರಣೆಗೆ ಆನ್‌ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಿ ಅರ್ಹರಿಗೆ ಪಡಿತರ ಚೀಟಿಗಳ ವಿತರಣೆ ಮಾಡುತ್ತಿದ್ದರೂ ಈ ವರ್ಷ ಒಟ್ಟು 7,379 ಮಂದಿ ಹೊಸ ಪಡಿತರ ಚೀಟಿಗಾಗಿ ಜಿಲ್ಲಾದ್ಯಂತ ಅರ್ಜಿ ಹಾಕಿ ಹೊಸ ಪಡಿತರ ಚೀಟಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಅಕ್ರಮ ದಾಖಲೆ ನೀಡಿದ್ದ 4.13 ಲಕ್ಷ Rationl Card ರದ್ದು
ರಾಜ್ಯ ಸರ್ಕಾರ (Karnataka Govt) ಅರ್ಹರಿಗೆ ಬಿಪಿಎಲ್ (BPL) ಪಡಿತರ ಚೀಟಿ ವಿತರಿಸಬೇಕೆಂಬ ನಿಯಮಗಳನ್ನು ರೂಪಿಸಿದೆ. ಇದರ ನಡುವೆ ಜಿಲ್ಲೆಯಲ್ಲಿ ಕೂಡ ಕೆಲ ಅರ್ನಹರು ಬಿಪಿಎಲ್ (BPL) ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಇದರ ನಡುವೆಯು ಇದೀಗ ಹೊಸದಾಗಿ 7.379 ಮಂದಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಇದೀಗ ಹೊಸ ಪಡಿತರ ಚೀಟಿಗಳ ವಿತರಣೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆಗೆ ಮುಂದಾಗಿದೆ.
ಅಧಿಕಾರಿಗಳಿಗೆ ಡಿಜಿಟಲ್ ಕೀ ಸಮಸ್ಯೆ!
ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಪಡಿತರ ಚೀಟಿ ವಿತರಿಸಲು ಇಲಾಖೆ ನೀಡಿರುವ ಡಿಜಿಟಲ್ ಕೀ ಸಮಸ್ಯೆ ಎದುರಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಆನ್‌ಲೈನ್ ಮೂಲಕವೇ ಅರ್ಜಿಗಳ ಪರಿಶೀಲಿಸಿ ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಲು ಅನುಮೋದನೆಗೆ ಸರ್ಕಾರ ಕೊಟ್ಟಿರುವ ಡಿಜಿಟಲ್ ಕೀ ವ್ಯವಸ್ಥೆ ತಾಂತ್ರಿಕ ದೋಷದಿಂದ ಕೂಡಿದೆ. ಆಗಾಗಿ ಹಳೆ ವ್ಯವಸ್ಥೆಯಲ್ಲಿ ಹೊಸ ಪಡಿತರ ಚೀಟಿ ವಿತರಿಸಲು ಸರ್ಕಾರ ಆದೇಶಿಸಿದೆಯೆಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.