ಅಂತಾರಾಜ್ಯ ಜಲವಿವಾದ, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ, ಸಚಿವ ಶಿವಾನಂದ ಪಾಟೀಲ
ಈ ಹಿಂದೆ ಕುಡಿಯುವ ನೀರಿನ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿತ್ತು. ಈಗ ಮಧ್ಯಸ್ಥಿಕೆ ವಹಿಸುತ್ತಿಲ್ಲ. ಅಂತಾರಾಜ್ಯ ಜಲ ವಿವಾದ ಬಗೆಹರಿಸಲು ಕೇಂದ್ರ ಮಧ್ಯಸ್ಥಿಕೆ ವಹಿಸಲು ಉದಾಸೀನ ಮಾಡುತ್ತಿದೆ. ಕೇಂದ್ರ ಮಧ್ಯಸ್ಥಿಕೆ ವಹಿಸಿದ್ದರೆ ಕಾವೇರಿ ಜಲ ವಿವಾದ ಇಷ್ಟು ದಿನಗಳವರೆಗೆ ಮುಂದುವರಿಯುತ್ತಿರಲಿಲ್ಲ: ಸಚಿವ ಶಿವಾನಂದ ಪಾಟೀಲ
ವಿಜಯಪುರ(ಸೆ.23): ದೀರ್ಘ ಕಾಲದಿಂದ ಪರಿಹಾರ ಕಾಣದೆ ನೆನೆಗುದಿಗೆ ಬಿದ್ದಿರುವ ಅಂತಾರಾಜ್ಯ ಜಲ ವಿವಾದಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಜವಳಿ, ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಕೋರಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕುಡಿಯುವ ನೀರಿನ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿತ್ತು. ಈಗ ಮಧ್ಯಸ್ಥಿಕೆ ವಹಿಸುತ್ತಿಲ್ಲ. ಅಂತಾರಾಜ್ಯ ಜಲ ವಿವಾದ ಬಗೆಹರಿಸಲು ಕೇಂದ್ರ ಮಧ್ಯಸ್ಥಿಕೆ ವಹಿಸಲು ಉದಾಸೀನ ಮಾಡುತ್ತಿದೆ. ಕೇಂದ್ರ ಮಧ್ಯಸ್ಥಿಕೆ ವಹಿಸಿದ್ದರೆ ಕಾವೇರಿ ಜಲ ವಿವಾದ ಇಷ್ಟು ದಿನಗಳವರೆಗೆ ಮುಂದುವರಿಯುತ್ತಿರಲಿಲ್ಲ. ರಾಜ್ಯ ಸರ್ಕಾರ ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಎದುರಿಗೆ ಸಮರ್ಥವಾಗಿ ವಾದ ಮಂಡಿಸಿದೆ. ಕಾವೇರಿ ವಿಷಯದ ಬಗ್ಗೆ ಕೋರ್ಟ್‌ಗೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ವಿರೋಧಿಗಳ ಟೀಕೆ ಸಲ್ಲದು. ರಾಜ್ಯ ಸರ್ಕಾರ ಸಮರ್ಥವಾಗಿ ತನ್ನ ಜವಾಬ್ದಾರಿ ನಿಭಾಯಿಸಿದೆ ಎಂದರು.
ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!
ಕೇಂದ್ರ ಸರ್ಕಾರ ಅಂತಾರಾಜ್ಯ ಜಲ ವಿವಾದದ ಬಗ್ಗೆ ಮಧ್ಯಸ್ಥಿಕೆ ವಹಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಜೊತೆಗೆ ಹೋರಾಟ ಮಾಡಬೇಕಿದೆ. ಅಂತಾರಾಜ್ಯ ಜಲ ವಿವಾದ ವಿಷಯದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸಿದ್ದರೆ ಈ ಸಮಸ್ಯೆ ಬಗೆಹರಿಯಲು ಸರಳವಾಗುತ್ತದೆ ಎಂದು ತಿಳಿಸಿದರು. ಜಲ ವಿವಾದಗಳು ದೀರ್ಘ ಕಾಲದವರೆಗೆ ಮುಂದುವರಿದರೆ ಆಯಾ ರಾಜ್ಯ ಹಾಗೂ ರಾಜ್ಯದ ಜನತೆಗೆ ಹಾನಿಯಾಗುತ್ತದೆ ಎಂದು ಅವರು ಹೇಳಿದರು.