ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ತಾತ್ಸಾರ- ಎನ್. ಚಲುವರಾಯಸ್ವಾಮಿ

ಕರ್ನಾಟಕದ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದ್ದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದರು.

 Central government  Neglect about Karnataka - N Chaluvarayaswamy   snr

  ಮೈಸೂರು :  ಕರ್ನಾಟಕದ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದ್ದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದರು.

ನಗರದ ಜೆ.ಕೆ. ಮೈದಾನದ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ಶುಕ್ರವಾರ ನಡೆದ ರೈತ ದಸರಾ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿ, ಕೇಂದ್ರ ಸರ್ಕಾರ ತಾತ್ಸಾರ ತೋರುತ್ತಿದ್ದರೂ ನಮ್ಮ ಸರ್ಕಾರವು ಕಾವೇರಿ ವಿಚಾರದಲ್ಲಿ ರೈತರ ಪರ ನಿಂತಿದ್ದೇವೆ. ನ್ಯಾಯಾಲಯ ಮತ್ತು ಕಾವೇರಿ ಮಂಡಳಿಗೆ ಗೌರವ ನೀಡಿದ್ದೇವೆ. ಹಾಗೆಯೇ, ಕುಡಿಯುವ ನೀರಿನ ಬಗ್ಗೆ ಬದ್ಧತೆ ತೋರಿದ್ದೇವೆ. ಆದರೆ, ಅವರಂತೆ ನಾವು ತಾತ್ಸಾರ ತೋರಿದ್ದರೆ, ರಾಜ್ಯ ಮತ್ತಷ್ಟು ಸಂಕಷ್ಟಕ್ಕೆ ತುತ್ತಾಗುತ್ತಿತ್ತು ಎಂದರು.

ಕಾವೇರಿ ಗಲಾಟೆ ವಿಚಾರದಲ್ಲಿ ಮೂರು ಬಾರಿ ಸರ್ವಪಕ್ಷಗಳ ಸಭೆ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಪ್ರಧಾನಿ ಭೇಟಿಗೆ ಅವಕಾಶ ಕೇಳುತ್ತಿದ್ದರೂ ಈವರೆಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಲ್ಲಿ 27 ಮಂದಿ ಸಂಸದರಿದ್ದು, ಆದರೆ, ಅವರಿಗೆ ಕಾವೇರಿ ವಿಚಾರದಲ್ಲಿ ಆಸಕ್ತಿ ಇಲ್ಲ. ಕೇವಲ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಳಲ್ಳು ಆಸಕ್ತಿ ತೋರುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 123 ವರ್ಷಗಳ ನಂತರ ಈ ರೀತಿ ಮಳೆ ಕೊರತೆ ಎದುರಿಸುತ್ತಿದ್ದೇವೆ. ಈ ನಡುವೇ ನಾನು ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಅವರು ಕೇಂದ್ರದ ಜಲಶಕ್ತಿ ಮಂತ್ರಿಗಳು ಮತ್ತು ಪ್ರಧಾನಿ ಆಪ್ತ ಕಾರ್ಯದರ್ಶಿಗಳ ಭೇಟಿಗೆ ಅವಕಾಶ ಕೇಳುತ್ತಿದ್ದು, ಕೇಂದ್ರ ಸಚಿವರು ಹಾಗೂ ಅಧಿಕಾರಿಗಳು ಸಹ ಭೇಟಿಗೆ ಅವಕಾಶ ನೀಡಲಿಲ್ಲ. ಇದು ಒಕ್ಕೂಟ ವ್ಯವಸ್ಥೆಯಲ್ಲಿ ದುರಂತ ಎಂದು ಅವರು ಕಿಡಿಕಾರಿದರು.

ಲೋಕಸಭಾ ಚುನಾವಣೆ ವೇಳೆ ಜನರು ಈ ಅಂಶಗಳನ್ನ ಗಮನಿಸಿ ಆಯ್ಕೆ ಮಾಡಬೇಕು. ಸುಳ್ಳು ಹೇಳುವವರ ಬಗ್ಗೆ ಜನರು ಸೂಕ್ಷ್ಮವಾಗಿ ಗಮನಿಸಬೇಕು. ವಾಸ್ತವತೆಯನ್ನ ತಿಳಿದುಕೊಳ್ಳಬೇಕು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 216 ತಾಲೂಕುಗಳು ಬರಗಾಲವನ್ನು ಎದುರಿಸುತ್ತಿದೆ. ಈ ನಡುವೆ ರಾಜ್ಯ ಸರ್ಕಾರವು ಎರಡು ಹಂತದಲ್ಲಿ ಕೇಂದ್ರ ಸರ್ಕಾರಕ್ಕೆ 5020 ಕೋಟಿ ರೂ. ವಿಶೇಷ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗಕ್ಕೆ ಆಗ್ರಹ

  ಮೈಸೂರು :  ಮೈಸೂರು ಮತ್ತು ನಂಜನಗೂಡು ತಾಲೂಕಿನಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಕೆಲಸ ನೀಡುವಂತೆ ಆಗ್ರಹಿಸಿ ಕೆಐಎಡಿಬಿಗೆ ಭೂಮಿ ನೀಡಿದ ರೈತರ ಹಕ್ಕುಗಳ ಹೋರಾಟ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟಿಸಿದರು.

ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆ ಮತ್ತು ಪೂರಕ ಸೌಲಭ್ಯಗಳಿಗಾಗಿ ರೈತರಿಗೆ ಸೇರಿದ ಕೃಷಿ ಜಮೀನನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿದೆ. ಕೈಗಾರಿಕಾ ನೀತಿ ಅನ್ವಯ ಈ ಜಮೀನುಗಳಲ್ಲಿ ಸ್ಥಾಪನೆಯಾದ ಕೈಗಾರಿಕೆಗಳು ಜಮೀನು ನೀಡಿದ ರೈತರಿಗೆ ಕಾಯಂ ಉದ್ಯೋಗ ನೀಡಬೇಕು. ಆದರೆ, ಬಹುತೇಕ ಕೈಗಾರಿಕೆಗಳು ಈ ನಿಯಮ ಪಾಲಿಸುತ್ತಿಲ್ಲ ಎಂದು ಅವರು ಕಿಡಿಕಾರಿದರು.

ಕೈಗಾರಿಕೆಗಳು ಸ್ಥಾಪನೆಯಾದರೆ ಉದ್ಯೋಗ ಸೃಷ್ಟಿಯಾಗುತ್ತದೆ, ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಫಲವತ್ತಾದ ಭೂಮಿಯನ್ನು ನೀಡಿದ ರೈತರು, ಉದ್ಯೋಗಕ್ಕಾಗಿ ವರ್ಷಗಟ್ಟಲೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಸ್ಥಾಪನೆಯಾಗಿ 30 ವರ್ಷ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಕಾಯಂ ಉದ್ಯೋಗ ನೀಡದೆ ಹೊರಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸರ್ಕಾರದ ಕೈಗಾರಿಕಾ ನೀತಿಯ ಅನ್ವಯ ಕೆಲಸ ಕೊಡಿಸುವ ನಿಟ್ಟಿನಲ್ಲಿ ಉದ್ಯೋಗ ನೀಡಬೇಕೆಂದು ತೀರ್ಮಾನವಾಗಿದೆ. ಆದರೆ, ಇದುವರೆಗೂ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಕೆಲಸ ಸಿಕ್ಕಿಲ್ಲ. ಈ ಕೈಗಾರಿಕೆಗಳಲ್ಲಿ ಕೆಐಎಡಿಬಿ ಮತ್ತು ವಾಣಿಜ್ಯ ಕೈಗಾರಿಕಾ ಇಲಾಖೆ ಅಧಿಕಾರಿಗಳ ಆದೇಶಕ್ಕೆ ಬೆಲೆಯೇ ಇಲ್ಲ. ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಉದ್ಯೋಗ ನೀಡಬೇಕೆಂದು ಆದೇಶಿಸಿದ್ದರೂ ಕಾರ್ಖಾನೆಗಳು ಕೆಲಸ ನೀಡುತ್ತಿಲ್ಲ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಉದ್ಯೋಗ ಕೊಡಿಸಬೇಕು ಎಂದು ಅವರು ಒತ್ತಾಯಿಸಿದರು.

Latest Videos
Follow Us:
Download App:
  • android
  • ios