Asianet Suvarna News Asianet Suvarna News

ಕೊಬ್ಬರಿ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ : ರೈತ ಸಂಘ

ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು, ಏಪ್ರಿಲ್ 5ರೊಳಗೆ ನಾಫೆಡ್ ಖರೀದಿ ಕೇಂದ್ರ ತೆರೆಯದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗು ವುದು ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.

Central government responsible for fall in coconut prices: Farmers Union snr
Author
First Published Mar 27, 2024, 10:06 AM IST

  ತುಮಕೂರು :  ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು, ಏಪ್ರಿಲ್ 5ರೊಳಗೆ ನಾಫೆಡ್ ಖರೀದಿ ಕೇಂದ್ರ ತೆರೆಯದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗು ವುದು ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.

ವಿಜ್ಞಾನ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ 12 ಸಾವಿರ ರು. ಬೆಂಬಲ ಬೆಲೆ ಮತ್ತು ರಾಜ್ಯ ಸ ರ್ಕಾರದ 1500 ರು. ಪ್ರೋತ್ಸಾಹ ಧನ ಸೇರಿ ಕ್ವಿಂಟಾಲ್‌ಗೆ 13500 ರು. ಬೆಲೆಯಲ್ಲಿ ಕೊಬ್ಬರಿಗೆ ರೈತರು ನೊಂದಣಿ ಮಾಡಿ, ಕೊಬ್ಬರಿ ಸುಲಿದು ಕಾಯುತ್ತಿದ್ದರೂ ಇದುವರೆಗೂ ಖರೀದಿ ಕೇಂದ್ರ ತೆರೆದಿಲ್ಲ. ದಿನದಿಂದ ದಿನಕ್ಕೆ ಕೊಬ್ಬರಿ ತೂಕ ಕಡಿಮೆಯಾಗು ವುದರ ಜೊತೆಗೆ, ಕೌಟಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಸರ್ಕಾರ ಕೂಡಲೇ ನಾಫೆಡ್ ಖರೀದಿ ಕೇಂದ್ರ ತೆರೆಯದಿದ್ದರೆ ರೈತರು ಬೀದಿಯಿಳಿಯುವುದು ಅನಿವಾರ್ಯ ಎಂದರು.

ಕೊಬ್ಬರಿ ಬೆಲೆ ತೀವ್ರ ಕುಸಿತಕ್ಕೆ ಕೇಂದ್ರ ಸರ್ಕಾರ ನೆರೆಯ ದೇಶಗಳಿಂದ ಸುಂಕ ರಹಿತವಾಗಿ ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ಅಮದು ಮಾಡಿಕೊಳ್ಳುತ್ತಿರುವುದೇ ಪ್ರಮುಖ ಕಾರಣವಾಗಿದೆ. ಕೂಡಲೇ ಅಮದು ನಿಲ್ಲಿಸಬೇಕು. ಹಾಗೆಯೇ ಕರ್ನಾಟಕ ರಾಜ್ಯ ಕೃಷಿ ಬೆಲೆ ನಿಗದಿ ಆಯೋಗದ ವರದಿಯಂತೆ 16730 ರು.ಕ್ವಿಂಟಾಲ್‌ಗೆ ಮತ್ತು ಶೇ.50ರ ಲಾಭ ಸೇರಿ ಕ್ವಿಂಟಾಲ್‌ಗೆ 25 ಸಾವಿರ ರು.ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದು ಗೋವಿಂದರಾಜು ತಿಳಿಸಿದರು.

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಸಂಪೂರ್ಣ ಹದಗೆಟ್ಟಿದ್ದು, ದಿನಕ್ಕೆ 7 ಗಂಟೆಗೆ ಸಮರ್ಪಕ ವಿದ್ಯುತ್ ನೀಡುವ ಭರವಸೆ ನೀಡಿದ್ದ ಸರ್ಕಾರ, ದಿನಕ್ಕೆ ಒಂದು ಗಂಟೆಯೂ ನೀಡುತ್ತಿಲ್ಲ. ಬದಲಿಗೆ ದಿನ ಬಿಟ್ಟು ದಿನ ವಿದ್ಯುತ್ ಸರಬರಾಜು ಮಾಡುತ್ತಿದೆ. ಪರೀಕ್ಷಾ ಸಮಯದಲ್ಲಿ ಸಿಂಗಲ್ ಫೇಸ್ ವಿದ್ಯುತ್ ಕಡಿತ ಮಾಡಿರುವುದರಿಂದ ಮಕ್ಕಳ ಅಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ. ಅಲ್ಲದೆ ರಾಜ್ಯ ಸರ್ಕಾರ ಇನ್ನು ಮುಂದೆ ಅಕ್ರಮ-ಸಕ್ರಮ ವಿದ್ಯುತ್ ಸಂಪರ್ಕಕ್ಕೆ ಪರಿಕರಗಳನ್ನು ನೀವೇ ಕೊಳ್ಳುವಂತೆ ಆದೇಶ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ತೀವ್ರ ಬರಗಾಲವಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಂತಹ ಹೊತ್ತಿನಲ್ಲಿ ಬೋರೆವೆಲ್ ಡಿಗ್ಗಿಂಗ್ ಮಾಡುವ ವಾಹನ ಲಾರಿ ಮಾಲೀಕರು ಏಕಾಏಕಿ ಅಡಿಗೆ 15-20 ರು.ಹೆಚ್ಚಳ ಮಾಡಿರುವುದು ರೈತರನ್ನು ಸಾಕಷ್ಟು ಸಂಕಷ್ಟಕ್ಕೆ ದೂಡಿದೆ. ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ, ಬೋರೆವೆಲ್ ಲಾರಿಗಳ ಮಾಲೀಕರು, ರೈತರ ಸಭೆ ನಡೆಸಿ, ಕೂಡಲೇ ಹೆಚ್ಚಳ ಮಾಡಿರುವ ಬೆಲೆ ಕಡಿಮೆ ಮಾಡಬೇಕೆಂದು ಎ.ಗೋವಿಂದರಾಜು ಒತ್ತಾಯಿಸಿದರು.

ಬರ ಮತ್ತಿತರರ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೃಷಿ ಕಾರ್ಮಿಕರ ನೆರವಿಗೆ ಬರುತಿದ್ದ ನರೇಗಾ ಯೋಜನೆಯ ಕೂಲಿ ಕಾರ್ಮಿ ಕರಿಗೆ ಕಳೆದ 7-8 ತಿಂಗಳಿನಿಂದ ಕೂಲಿ ಹಣ ಬಿಡುಗಡೆಯಾಗಿಲ್ಲ.ಒಂದೆಡೆ ಬರದಿಂದ ತತ್ತರಿಸಿರುವ ಜನರಿಗೆ ಸರಕಾರ ಈ ನಡೆ ನುಂಗಲಾರದ ತುತ್ತಾಗಿದೆ. ಕೂಡಲೇ ಬಾಕಿ ಇರುವ ಕೂಲಿ ಹಣವನ್ನು ಸಂಬಂಧಪಟ್ಟವರ ಖಾತೆಗೆ ವರ್ಗಾಯಿಸಬೇಕೆಂದು ರೈತರ ಸಂಘ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ, ದೊಡ್ಡಮಾಳಯ್ಯ, ವಿವಿಧ ತಾಲೂಕು ಅಧ್ಯಕ್ಷರಾದ ಲಕ್ಷ್ಮಣಗೌಡ, ವೆಂಕಟೇಗೌಡ, ನರಸಿಂಹಮೂರ್ತಿ, ರಂಗಹನುಮಯ್ಯ,ಯುವಘಟಕದ ಜಿಲ್ಲಾಧ್ಯಕ್ಷ ಚಿರತೆ ಚಿಕ್ಕಣ್ಣ, ಅರೆಹಳ್ಳಿ ಮಂಜುನಾಥ್,ಜಗದೀಶ್, ಶಿವಕುಮಾರ್,ತಿಪ್ಪೇಗೌಡ, ಮಹಮದ್ ಶಬ್ಬೀರ್, ಚಿಕ್ಕಬೋರೇಗೌಡ, ಸಿ.ಜಿ.ಲೋಕೇಶ್ ಮಹಿಳಾ ಮುಖಂಡರಾದ ಭಾಗ್ಯಮ್ಮ, ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು

\\Bಬಿಜೆಪಿ ಸೋಲಿಸಲು ರೈತಸಂಘದಿಂದ ಪ್ರಚಾರ\\B

ಬೆಂಬಲ ಬೆಲೆ ಶಾಸನಾತ್ಮಕ ಕಾಯ್ದೆ ಜಾರಿ, ವಿದ್ಯುತ್ ಖಾಸಗಿ ಬಿಲ್ ಮಂಡನೆ ಸೇರಿದಂತೆ ರೈತ ವಿರೋಧಿ ನೀತಿಗಳ ವಿರುದ್ಧ ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ಪ್ರತಿಭಟಿಸುತಿದ್ದರೆ ಅವರು ದೆಹಲಿ ಪ್ರವೇಶಿಸದಂತೆ ಜಲಪಿರಂಗಿ, ತಡೆಗೋಡೆ, ತಂತಿ ಬೇಲಿಗಳ ಮೂಲಕ ತಡೆಯಲು ಹೊರಟಿರುವುದು ಖಂಡನೀಯ ಎಂದು ಎ.ಗೋವಿಂದರಾಜು ಹೇಳಿದರು. ಸರ್ಕಾರದ ಈ ಕ್ರಮ ವಿರೋಧಿಸಿ ಮಾರ್ಚ್ ೧೪ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರೈತರ ಮಹಾಪಂಚಾಯತ್‌ನಲ್ಲಿ ರೈತ, ಕಾರ್ಮಿಕ, ಬಡಜನರ ವಿರೋಧಿ ಬಿಜೆಪಿ ಸರ್ಕಾರವನ್ನು ಈ ಬಾರಿ ಸೋಲಿಸುವಂತೆ ದೇಶದ ಜನರಿಗೆ ಕರೆ ನೀಡಲಾ ಗಿದೆ. ಮುಂದಿನ ದಿನಗಳಲ್ಲಿ ವ್ಯಾಪಾಕ ಪ್ರಚಾರವನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ರೈತ ಸಂಘ ಕೈಗೊಳ್ಳಲಿದೆ ಎಂದು ನುಡಿದರು.

ಬರ ನಿರ್ವಹಣೆ: ರಾಜ್ಯ ಸರ್ಕಾರ ನಿರ್ಲಕ್ಷ್ಯ

ಜಿಲ್ಲೆಯಲ್ಲಿ ತೀವ್ರ ಬರವಿದ್ದು, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಎದುರಾಗಿದೆ. ಇದುವರೆಗೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಬೆಳೆ ಪರಿಹಾರ ನೀಡಿಲ್ಲ. ಗೋಶಾಲೆ ತೆರೆದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ ಎಂದು ಹೇಳಿದರೂ ಪಿಡಿಒ ಮತ್ತು ತಹಸೀಲ್ದಾರರುಗಳ ಸಮರ್ಪಕವಾಗಿ ಹಣ ಬಿಡುಗಡೆ ಮಾಡದೆ ತೊಂದರೆ ಅನುಭವಿಸುವಂತೆ ಮಾಡಿದ್ದಾರೆ. ಜಿಲ್ಲಾಡಳಿತ ಶ್ರೀಘ ಕ್ರಮ ಕೈಗೊಳ್ಳಬೇಕೆಂಬುದು ರೈತರ ಒತ್ತಾಯವಾಗಿದೆ.

- ಎ.ಗೋವಿಂದರಾಜು, ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ

Follow Us:
Download App:
  • android
  • ios