ಹುಬ್ಬಳ್ಳಿ(ಫೆ.02): ನಗರದಲ್ಲಿ ದೇಶಪಾಂಡೆ ಪ್ರತಿಷ್ಠಾನ ಅತ್ಯುತ್ತಮ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯ ಹೊಂದಬೇಕಾದ ಅವಶ್ಯಕತೆಯಿದೆ. ಇಂಗ್ಲಿಷ್, ಹಿಂದಿ ಕಲಿಯಿರಿ ಆದರೆ ಕನ್ನಡ ಮರೆಯಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಭಾನುವಾರ ನಗರದ ದೇಶಪಾಂಡೆ ಪ್ರತಿಷ್ಠಾನದ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಉದ್ಘಾಟಿಸಿದ್ದಾರೆ. 

ಇಂಗ್ಲಿಷ್ ಕಲಿಯಿರಿ ಆದರೆ ಇಂಗ್ಲಿಷರಂತೆ ವರ್ತಿಸಬೇಡಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಕಾರ್ಯಕ್ರಮದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಪ್ರಲ್ಹಾದ್ ಜೋಶಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತೆ ದೊಡ್ಡ ನಾಯಕರಾಗಿ ಬೆಳೆಯಬೇಕೆಂದರೆ ಹಿಂದಿ ಕಲಿಯಬೇಕು. ಏನೇ ಮಾಡಿದರೂ ಆತ್ಮವಿಶ್ವಾಸದಿಂದ ಮಾಡಬೇಕು ಎಂದು ಹೇಳಿದ್ದಾರೆ.