Asianet Suvarna News Asianet Suvarna News

ರೋಗ ಮುಕ್ತ ಜೀವನಕ್ಕೆ ಸಿರಿಧಾನ್ಯ ಅವಶ್ಯಕ: ಕೆ. ಸುರೇಶ್

ಮಾನವ ಉತ್ತಮ ಆರೋಗ್ಯ ಪಡೆಯಬೇಕಾದರೆ ಸಿರಿಧಾನ್ಯ ಅವಶ್ಯಕತೆ ಇದ್ದು, ಇದರ ಬಳಕೆಯಿಂದ ರೋಗ ಮುಕ್ತ ಮತ್ತು ಸರಳ ಜೀವನ ನಡೆಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.

Cereal essential for disease free life: K. Suresh snr
Author
First Published Oct 4, 2023, 7:19 AM IST | Last Updated Oct 4, 2023, 7:19 AM IST

ತಿಪಟೂರು: ಮಾನವ ಉತ್ತಮ ಆರೋಗ್ಯ ಪಡೆಯಬೇಕಾದರೆ ಸಿರಿಧಾನ್ಯ ಅವಶ್ಯಕತೆ ಇದ್ದು, ಇದರ ಬಳಕೆಯಿಂದ ರೋಗ ಮುಕ್ತ ಮತ್ತು ಸರಳ ಜೀವನ ನಡೆಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.

ಕರಡಿ ವಲಯದ ನ್ಯಾಕೇನಹಳ್ಳಿ ಜ್ಞಾನ ವಿಕಾಸ ಕೇಂದ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಸಿರಿಧಾನ್ಯ ಬಳಕೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳದ ಸಿರಿ ಸಂಸ್ಥೆಯಿಂದ ಸಿರಿಧಾನ್ಯ ಬೆಳೆಯುವ ರೈತರನ್ನು ಸಂಪರ್ಕಿಸಿ ಗ್ರಾಹಕರಿಗೆ ನೇರ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಿದೆ. ಸಂಸ್ಥೆ ರೈತರಿಂದ ನೇರವಾಗಿ ಖರೀದಿಸಲ್ಪಟ್ಟ ಸಿರಿಧಾನ್ಯ ಅತ್ಯುತ್ತಮ ಹಾಗೂ ಆಕರ್ಷಕ ಬೆಲೆಯಲ್ಲಿ ಗ್ರಾಹಕರಿಗೆ ಸಿಗುವಂತೆ ಮಾಡಲಾಗಿದೆ. ಸಿರಿ ಧಾನ್ಯ ಬಳಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂದರು.

ತಾ.ಪಂ. ಮಾಜಿ ಅಧ್ಯಕ್ಷ ಸುರೇಶ್, ಹಾಲಿನ ಡೇರಿ ಕಾರ್ಯದರ್ಶಿ ಶಿವಾನಂದ್, ಅಧ್ಯಕ್ಷೆ ನಂಜಮ್ಮ, ಸಮನ್ವಯಾಧಿಕಾರಿ ಮೀನಾಕ್ಷಿ ಸೇರಿದಂತೆ ಕೇಂದ್ರದ ಎಲ್ಲಾ ಸದಸ್ಯರುಗಳಿದ್ದರು.

ದೇಶಾದ್ಯಂತ ತಲುಪಿದ ಸಿರಿದಾನ್ಯ

ಬೀದರ್(ಆ.09): ಕೋವಿಡ್ ಸಂಕಷ್ಟದ ಆ ದಿನಗಳು, ಜನಾರೋಗ್ಯದ ಚಿಂತೆ, ವಿಷಕಾರಿ ಆಹಾರದ ಆತಂಕದ ಮಧ್ಯಯೇ ಚಿಗುರೊಡೆದ ವ್ಯಾಪಾರೋದ್ಯಮದ ಕನಸು, 5 ಸಾವಿರ ರು. ಬಂಡವಾಳ, ಸರ್ಕಾರದ ಪ್ರೋತ್ಸಾಹದೊಂದಿಗೆ ಮೂರು ವರ್ಷಗಳ ಹಿಂದೆ ಆರಂಭಿಸಿದ ಸಿರಿಧಾನ್ಯದ ವ್ಯಾಪಾರ ಇದೀಗ ಕೋಟ್ಯಂತರ ರೂಪಾಯಿ ವ್ಯವಹಾರದೊಂದಿಗೆ ಬೃಹದಾಕಾರವಾಗಿ ಬೆಳೆದು ನಿಂತಿದೆ. ಹಳ್ಳಿ, ಪಟ್ಟಣಗಳಿಗೆ ಸೀಮಿತವಾಗಿದ್ದ ಮಾರಾಟ ಇದೀಗ ದಿಲ್ಲಿ, ಮುಂಬೈಗೂ ತಲುಪಿಯಾಗಿದೆ.

ಅರಬ್ ದೇಶಗಳಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ಎಂಜಿನಿಯರ್. ಸಾವಿರಾರು ಜನ ಎಂಜಿನಿಯರ್ ಸಿಬ್ಬಂದಿಗೆ ಮೇಲಾಧಿಕಾರಿಯಾಗಿ ಕೈತುಂಬಾ ಸಂಬಳ ಪಡೆಯುತ್ತಿದ್ದ ಸಂಜೀವಕುಮಾರ್ ಭಾಸನ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ ಆಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಶಶಿಧರ್ ಭಾಸನ್ ಇಲ್ಲಿನ ಜಿಲ್ಲೆಯ ಹೊಚಕನಳ್ಳಿ ಗ್ರಾಮದ ಸಹೋದರರು ಕೋವಿಡ್ ದಿನಗಳಲ್ಲಿ ತಮ್ಮ ವೃತ್ತಿ ತೊರೆದು ಆರಂಭಿಸಿರುವ ಈ ಸ್ಟಾರ್ಟ್ಅಪ್ ಇದೀಗ ದೇಶದ ವಿವಿಧೆಡೆ ತಮ್ಮ ವ್ಯಾಪಾರ ವಿಸ್ತರಿಸಿದೆ. 

ಕಲ್ಪವೃಕ್ಷ ನೀಡಿದ ಕಲ್ಪರಸ, ಇದು ಕರಾವಳಿಯ ಕಾಮಧೇನು!

ಕೋವಿಡ್ ವಿಶ್ವ ವ್ಯಾಪಿಯಾಗಿದ್ದ 2020ರಲ್ಲಿ ರುಚಿತ್-ಬಿ ಸಿರಿಧಾನ್ಯಗಳ ಸಿರಿ ಎಂಬ ಹೆಸರಿನೊಂದಿಗೆ ಬೀದರ್ ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಿರುವ ಮೆ. ಭಾಸನ್ ಎಂಟರ್‌ಪ್ರೈಸಸ್‌ನ ಏಕದಳ ಧಾನ್ಯಗಳ ಆಹಾರೋತ್ಪನ್ನ, ಪೌಷ್ಠಿಕ ಆಹಾರ ಪ್ರೋತ್ಸಾಹ ಉದ್ಯಮವೀಗ ಹೆಮ್ಮರವಾಗಿ ಬೆಳೆಯುತ್ತಿದೆ.

ವ್ಯಾಪಾರೋದ್ಯಮ ಆರಂಭಿಸಲು ಪ್ರೇರಣೆ:

ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರಿಗೆ ಪೌಷ್ಠಿಕಾಂಶಗಳನ್ನು ಹೊಂದಲು ಸಿರಿಧಾನ್ಯಗಳ ಆಹಾರ ಸೇವನೆಯ ಸಲಹೆ ನೀಡುತ್ತ ಮನೆಯಲ್ಲಿಯೇ ಸಿರಿಧಾನ್ಯಗಳಿಂದ ಆಹಾರ ಪದಾರ್ಥಗಳನ್ನು ತಯಾರಿಸಿ ಪ್ರತಿ ಭಾನುವಾರ ಸಂಬಂಧಿಕರಿಗೆ, ಸ್ನೇಹಿತರಿಗೆ ನೀಡುತ್ತಾ ಹೋದದ್ದು, ಮುಂದೆ ವ್ಯಾಪಾರವಾಗಿ ಬೆಳೆಯಿತು. ರಾಯಚೂರು ಕೃಷಿ ವಿವಿಯಲ್ಲಿ ನಡೆದ ಸಿರಿಧಾನ್ಯ ಮೇಳದಲ್ಲಿ ಸಿಕ್ಕ ಸರ್ಕಾರದ ಪ್ರೋತ್ಸಾಹ ಕೈ ಹಿಡಿದು ಬೆಳೆಸಿದೆ. 

ಬಂಡವಾಳ ಹೂಡಿಕೆ, ವ್ಯಾಪಾರ ಬೆಳವಣಿಗೆ:

ಅಂದು 5 ಸಾವಿರ ರು. ಬಂಡವಾಳದೊಂದಿಗೆ ಆರಂಭವಾದ ಉದ್ಯಮ ಇದೀಗ ವಾರ್ಷಿಕ ಒಂದೂವರೆ ಕೋಟಿ ರು. ವ್ಯಾಪಾರಕ್ಕೇರಿದೆ. ಪ್ರತಿ ತಿಂಗಳು 600 ಕ್ವಿಂಟಲ್ ಸಿರಿಧಾನ್ಯಗಳ ಆಹಾರೋತ್ಪನ್ನಗಳು ಮಾರಾಟವಾಗುತ್ತವೆ. ಅಷ್ಟಕ್ಕೂ ಹೈದ್ರಾಬಾದ್‌ನ ಐಟಿಸಿ ಇವರ ಕೈಗಾರಿಕಾ ಘಟಕದಿಂದ ವಾರ್ಷಿಕ 155 ಟನ್‌ಗೂ ಹೆಚ್ಚು ಸಿರಿಧಾನ್ಯ ಜೋಳದ ನುಚ್ಚನ್ನು ಖರೀದಿಸುತ್ತದೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಹಾಗೂ ಗುಜರಾತ್‌ನಲ್ಲಿಯೂ ಇವರ ಉತ್ಪನ್ನಗಳು ಮಾರಾಟವಾಗುತ್ತವೆ. ಇವರು ಬೀದರ್, ರಾಯಚೂರು ಸೇರಿ ಮತ್ತಿತರೆಡೆಯಿಂದ ಸಿರಿಧಾನ್ಯಗಳನ್ನು ಖರೀದಿಸುತ್ತಾರೆ.

ಪಾಲ್ಗೊಂಡ ಮೇಳ, ಪುರಸ್ಕಾರಗಳು, ಸರ್ಕಾರದ ಸಹಕಾರ:

ಇವರು ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ, ಬೆಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ, ಗ್ಲೋಬಲ್ ಇನ್ವೆಸ್ಟ್ ಕರ್ನಾಟಕ ಹೀಗೆಯೇ ಅನೇಕ ಪ್ರತಿಷ್ಠಿತ ಮೇಳಗಳಲ್ಲಿ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಕೈಗಾರಿಕಾ ಇಲಾಖೆ ಸಹಯೋಗದೊಂದಿಗೆ ಪಾಲ್ಗೊಂಡು ಭೇಷ್ ಎನಿಸಿಕೊಂಡಿದ್ದಿದೆ. ಹಲವಾರು ಪ್ರಶಸ್ತಿಗಳು ಇವರ ಮುಡಿಗೇರಿವೆ.

ರೇಷ್ಮೆ ಕೃಷಿಯಲ್ಲಿ ಡಿಜಿಟಲ್ ಕ್ರಾಂತಿ ಮಾಡಿದ ಕೊರಟಗೆರೆಯ ಶ್ರೀವತ್ಸ: ರೇಷ್ಮೆಗೆ ಪ್ರತ್ಯೇಕ ಮೊಬೈಲ್ ಆ್ಯಪ್

Latest Videos
Follow Us:
Download App:
  • android
  • ios