ಹೊಸಪೇಟೆ(ಮಾ.05):  ಮಾಜಿ ಮಂತ್ರಿ ರಮೇಶ ಜಾರಕಿಹೊಳಿ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಪ್ರಕಟಿಸಿರುವ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ ದೊಡ್ಡಮನಿ, ಪ್ರ. ಕಾರ್ಯದರ್ಶಿ ಪ.ಯ. ಗಣೇಶ, ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಬಳಸಿಕೊಳ್ಳುತ್ತಿರುವುದು ಶೋಚನೀಯ ಎಂದು ಹೇಳಿದ್ದಾರೆ. 

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌, ಲಕ್ಷಾಂತರ ಮೌಲ್ಯದ ಕಟ್ಟಿಗೆ, ಜೀನ್ಸ್‌ ಭಸ್ಮ

ಪ್ರಸ್ತುತ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ವಾಗತಿಸುತ್ತದೆ ಹಾಗೂ ಅವರು ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.