ಮಣ್ಣು, ನೀರಿನ ಸಂರಕ್ಷಣೆಯ ಮೂಲಕ ಕೃಷಿ ಪದ್ಧತಿಯ ಬದಲಾವಣೆ ಅಗತ್ಯ

ಮಣ್ಣು ಮತ್ತು ನೀರಿನ ಸಂರಕ್ಷಣೆಯ ಮೂಲಕ ಕೃಷಿ ಪದ್ಧತಿಯ ಬದಲಾವಣೆ ಇಂದಿನ ಅಗತ್ಯವಾಗಿದೆ ಎಂದು ಜಲಾನಯನ ಇಲಾಖೆ ಆಯುಕ್ತ ಡಾ.ಎಂ.ಎ. ವೆಂಕಟೇಶ್‌ ಅಭಿಪ್ರಾಯಪಟ್ಟರು.

 Change in agricultural practices is necessary through conservation of soil and water snr

  ಹುಣಸೂರು :  ಮಣ್ಣು ಮತ್ತು ನೀರಿನ ಸಂರಕ್ಷಣೆಯ ಮೂಲಕ ಕೃಷಿ ಪದ್ಧತಿಯ ಬದಲಾವಣೆ ಇಂದಿನ ಅಗತ್ಯವಾಗಿದೆ ಎಂದು ಜಲಾನಯನ ಇಲಾಖೆ ಆಯುಕ್ತ ಡಾ.ಎಂ.ಎ. ವೆಂಕಟೇಶ್‌ ಅಭಿಪ್ರಾಯಪಟ್ಟರು.

ತಾಲೂಕಿನ ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯ ಮಾದಳ್ಳಿ ಮಠದಲ್ಲಿ ಐಟಿಸಿ ಎಂಎಸ್‌ಕೆ ಮತ್ತು ಔಟ್‌ರೀಚ್‌ ಸಂಸ್ಥೆಯ ಆಶ್ರಯದಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಯೋಜನೆಯಡಿ ಕೆರೆಗಳ ಸಮಗ್ರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ನೀರು ತುಂಬಿರುವ ಕೆರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶದ ಭೂಮಿಯ ಶೇ. 56ಭಾಗದ ಮಣ್ಣು ಇಂದಿಗೂ ಉತ್ತಮ ಗುಣಮಟ್ಟಮತ್ತು ಫಲವತ್ತತೆಯಿಂದ ಕೂಡಿದೆ. ಅತಿಯಾದ ರಸಗೊಬ್ಬರದ ಬಳಕೆ ಮತ್ತು ನೀರಿನ ಸಮರ್ಪಕ ನಿರ್ವಹಣೆಯಾಗದೇ ಕೃಷಿಯಲ್ಲಿ ಲಾಭ ದುರ್ಲಬವಾಗಲಿದೆ. ಕೃಷಿ ಪದ್ಧತಿಯ ಪರಿಕಲ್ಪನೆ ಬದಲಾಗಿದೆ. ಇದನ್ನು ರೈತರು ಅರ್ಥೈಸಿಕೊಂಡು ಬದಲಾಗಬೇಕು. ನೀರು ಮತ್ತು ಮಣ್ಣು ನಮ್ಮ ಜೀವ ಮತ್ತು ಜೀವನಕ್ಕೆ ಅತ್ಯಗತ್ಯವಾಗಿದ್ದು, ಐಟಿಸಿ ಮತ್ತು ಔಟ್‌ರಿಚ್‌ ಕಂಪನಿಗಳು ಗ್ರಾಮೀಣ ಭಾಗದಲ್ಲಿ ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿಗೊಳಿಸಿರುವುದು ಶ್ಲಾಘನೀಯ ಕಾರ್ಯವೆಂದರು.

ಐಟಿಸಿ ಎಂಎಸ್‌ಕೆ ಪ್ರಾದೇಶಿಕ ವ್ಯವಸ್ಥಾಪಕ ಮಂಜುನಾಥ್‌ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ 330 ಕೆರೆಗಳ ಹೂಳೆತ್ತುವ ಕಾರ್ಯಕ್ರಮ, ಬದು ನಿರ್ಮಾಣ, ಕೃಷಿಹೊಂಡ ಕಾರ್ಯಕ್ರಮಗಳನ್ನು ರೈತರು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡಿದ್ದಾರೆಂದರು.

ಐಟಿಸಿ ಎಂಎಸ್‌ಕೆ ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಹರೀಶ್‌ ಬಾಬು, ಕೃಷಿ ಇಲಾಖೆ ಉಪ ನಿರ್ದೇಶಕ ಕೆ.ರಾಜು, ಬನ್ನಿಕುಪ್ಪೆ ಗ್ರಾ.ಪಂ. ಅಧ್ಯಕ್ಷೆ ಶಿವಮ್ಮಪುಟ್ಟನಾಯಕ, ಉಪಾಧ್ಯಕ್ಷೆ ಅಂಬಿಕಾ ರೇವಣ್ಣ, ಸದಸ್ಯರಾದ ನಿಂಗೇಗೌಡ, ಶಂಕರೇಗೌಡ, ದಿನೇಶ್‌, ಪಿಡಿಓ ರಾಘವೇಂದ್ರ ಪ್ರಸನ್ನ, ಐಟಿಸಿ ಕಂಪನಿಯ ಅಧಿಕಾರಿ ಮನೋಜ್‌, ಯಾಜಮಾನರಾದ ಕರಿನಾಯಕ, ನಂಜನಾಯಕ, ಔಟ್‌ ರೀಚ್‌ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಉಳಿಸಿ ಬೆಳೆಸಿ

ವಿಶ್ವ ಪರಿಸರ ದಿನ (World Environment Day)ವನ್ನು ಪ್ರತಿ ವರ್ಷ ಜೂನ್ 5ರಂದು ಆಚರಿಸಲಾಗುತ್ತದೆ. ಇದು ಹಸಿರನ್ನು ಉಳಿಸಿ ಬೆಳೆಸುವ ಮೂಲಕ ಹೆಚ್ಚು ಸಮರ್ಥನೀಯ ಭವಿಷ್ಯವನ್ನು (Future) ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ದಿನದಂದು ಪರಿಸರದ ಬಗ್ಗೆ ಜಾಗೃತಿ (Awareness) ಮೂಡಿಸಲು ಮತ್ತು ಪರಿಸರದ ರಕ್ಷಣೆಗೆ (Protection) ಉತ್ತೇಜನೆ ನೀಡಲು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರವು ಅತಿ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿಯೇ ಈ ದಿನಕ್ಕೆ ಅತಿ ಹೆಚ್ಚು ಪ್ರಾಮುಖ್ಯತೆಯಿದೆ. 

ಮಾನವ (Human) ಸೇರಿದಂತೆ ಇತರ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ತನ್ನ ಅನುಕೂಲತೆಗಳಿಗಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರವೇ ಹಾಳಾಗುತ್ತಿದೆ. ಇದರಿಂದಾಲೇ ಹವಾಮಾನ (Weather) ವೈಪರೀತ್ಯ, ಆರೋಗ್ಯ ಸಮಸ್ಯೆಗಳು (Health Problem) ಸಹ ಹೆಚ್ಚಾಗ್ತಿದೆ. ಹೀಗಾಗಿಯೇ ಪರಿಸರವನ್ನು ಉಳಿಸುವಂತೆ ಜನರಿಗೆ ಎಚ್ಚರಿಕೆ ನೀಡಲು ಪರಿಸರ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. 

Chamarajnagar: ಹಸಿರಿನ ವನರಾಶಿಯಿಂದ ನಳನಳಿಸುತ್ತಿದೆ ಬಂಡೀಪುರ!

ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯ (Theme)ದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. 

​ವಿಶ್ವ ಪರಿಸರ ದಿನದ ಆಚರಣೆ ಆರಂಭವಾಗಿದ್ದು ಯಾವಾಗ ?
ವಿಶ್ವ ಪರಿಸರ ದಿನವನ್ನು 1974ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 ಜೂನ್ 5ರಂದು ಮೊದಲು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ.

​ವಿಶ್ವ ಪರಿಸರ ದಿನವನ್ನು ಯಾಕೆ ಆಚರಿಸಲಾಗುತ್ತದೆ ?
ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5ರಂದು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ.

1 ಕೆಜಿ ಚಹಾ ಎಲೆ 11 ಲಕ್ಷ ರೂಪಾಯಿಗೆ ಮಾರಾಟವಾಯ್ತು..! ಯಾಕಿಷ್ಟು ಕಾಸ್ಟ್ಲೀ ?

​ವಿಶ್ವ ಪರಿಸರ ದಿನ 2022ರ ಧ್ಯೇಯವಾಕ್ಯ
ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ಧ್ಯೇಯವಾಕ್ಯದ ಉದ್ದೇಶ ಪರಿಸರದ ಬಗ್ಗೆ ಪ್ರತಿ ಎಲ್ಲರಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. 2022ರಲ್ಲಿ ಪರಿಸರ ದಿನಾಚರಣೆಯ ಹೋಸ್ಟ್‌ ಸ್ವೀಡನ್‌ ಆಗಿದೆ. 2022ರ ಧ್ಯೇಯವಾಕ್ಯ 'ಒಂದೇ ಒಂದು ಭೂಮಿ' ಎಂಬುದಾಗಿದೆ. 

Latest Videos
Follow Us:
Download App:
  • android
  • ios