Asianet Suvarna News Asianet Suvarna News

ದೇವಾಲಯಗಳಲ್ಲಿ ಕನ್ನಡದಲ್ಲಿಯೇ ಮಂತ್ರ..!

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಚಾಮರಾಜನಗರ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಮಂತ್ರೋಚ್ಚಾರಣೆ, ಪೂಜಾ ವಿಧಿ ವಿಧಾನಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಆದೇಶ ಹೊರಡಿಸಿದ್ದಾರೆ.

 

Chanting Kannada mantra in temples
Author
Bangalore, First Published Mar 9, 2020, 8:56 AM IST

ಚಾಮರಾಜನಗರ(ಮಾ.09): ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಚಾಮರಾಜನಗರ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಮಂತ್ರೋಚ್ಚಾರಣೆ, ಪೂಜಾ ವಿಧಿ ವಿಧಾನಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಎ, ಬಿ ಮತ್ತು ಸಿ ಶ್ರೇಣಿಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಪೂಜಾ ವಿಧಿ ವಿಧಾನ ಕೈಗೊಳ್ಳಬೇಕು.

JDS ಮಾಸ್ಟರ್ ಪ್ಲಾನ್: ನಿಖಿಲ್ ಅದ್ಧೂರಿ ಮದುವೆ ಮೂಲಕ ಮತ ಸೆಳೆಯುವ ತಂತ್ರ

ಮಂತ್ರೋಚ್ಚಾರಣೆ, ಅರ್ಚನೆ, ಸಂಕಲ್ಪ ಇತ್ಯಾದಿ ಪೂಜಾ ಕೈಂಕರ್ಯವನ್ನು ಚಾಲ್ತಿಯಲ್ಲಿರುವ ಸಂಪ್ರದಾಯ ಹಾಗೂ ಧಾರ್ಮಿಕ ಪದ್ಧತಿಗಳಿಗೆ ಧಕ್ಕೆ ಬಾರದಂತೆ ಕನ್ನಡದಲ್ಲಿ ನೆರವೇರಿಸಿಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಸೂಚಿಸಿದ್ದಾರೆ.

"

Follow Us:
Download App:
  • android
  • ios