ಚಾರ್ಮಾಡಿ ರಸ್ತೆ ಸಂಚಾರಕ್ಕೆ ಮುಕ್ತ : ಆದ್ರೆ ಕಂಡೀಶನ್ ಇದೆ
ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಹಲವು ನಿಯಮಗಳನ್ನು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಂಗಳೂರು [ನ.28]: ಕಳೆದ ಆಗಸ್ಟ್ನಲ್ಲಿ ಸುರಿದ ಭಾರಿ ಮಳೆಗೆ ಕುಸಿದು ಹೋಗಿದ್ದ ರಾಷ್ಟ್ರೀಯ ಹೆದ್ದಾರಿ- 73ರ ಮಂಗಳೂರು- ವಿಲ್ಲುಪುರಂ ರಸ್ತೆಯ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಗುರುವಾರದಿಂದ ಅವಕಾಶ ನೀಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ನದಿಪಾತ್ರಕ್ಕೆ ಶಾಶ್ವತ ತಡೆಗೋಡೆ: ಬೊಮ್ಮಾಯಿ ಭರವಸೆ...
ಆ.8ರಿಂದ ಸುರಿದ ಭಾರಿ ಮಳೆಗೆ ಘಾಟ್ ಭಾಗದ ಸುಮಾರು 14 ಕಡೆ ಗುಡ್ಡ ಕುಸಿತ ಉಂಟಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಳಿಕ ಭಾಗಶಃ ದುರಸ್ತಿ ಕಾರ್ಯದ ಬಳಿಕ ಸೆ.14ರಿಂದ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸೀಮಿತಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇದೀಗ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದ ಪ್ರಕಾರ ಕಾರು, ಜೀಪು, ಟೆಂಪೋ, ವ್ಯಾನ್, ಮಿನಿವ್ಯಾನ್, ದ್ವಿಚಕ್ರ ವಾಹನಗಳು ಹಾಗೂ ಆ್ಯಂಬುಲೆನ್ಸ್ಗಳಿಗೆ ದಿನಪೂರ್ತಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವೇಗದ ಮಿತಿ ಗಂಟೆಗೆ 20 ಕಿ.ಮೀ. ಮೀರುವಂತಿಲ್ಲ. ಜೊತೆಗೆ ಜಾರ್ಮಾಡಿ ಘಾಟ್ ರಸ್ತೆಯಲ್ಲಿ ಫೋಟೊಗ್ರಫಿ ಹಾಗೂ ಸೆಲ್ಫಿ ತೆಗೆಯುವುದನ್ನು ನಿಷೇಧಿಸಲಾಗಿದೆ. ಇದರ ಹೊರತಾಗಿ ಬಸ್ ಸಹಿತ ಎಲ್ಲ ವಿಧದ ಭಾರಿ ವಾಹನಗಳ ಸಂಚಾರದ ನಿಷೇಧ ಮುಂದಿನ ಆದೇಶದ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶ ತಿಳಿಸಿದೆ.