ತಿಪಟೂರು (ನ.12) :  ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಚಿದಾನಂದ ಗೌಡ ಗೆಲುವು ಸಾಧಿಸುವ ಮೂಲಕ ಪಕ್ಷಕ್ಕೆ ಮತ್ತೊಂದು ಗೆಲುವು ಸಿಕ್ಕಿದಂತಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿಸಲೇಹಳ್ಳಿ ಜಗದೀಶ್‌ ಸಂತಸ ವ್ಯಕ್ತಪಡಿಸಿದ್ದಾರೆ. 

ಚಿದಾನಂದಗೌಡರವರಿಗೆ ತಿಪಟೂರಿನ ಪದವೀಧರ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಗಾಗಿ ದುಡಿದ ಮತ್ತೋರ್ವ ಮುಖಂಡಗೆ ಸಚಿವ ಸ್ಥಾನ : ಸಿಎಂ ಆಪ್ತರಿಂದಲೇ ವಿರೋಧ .

 ಮುಂದಿನ ದಿನಗಳಲ್ಲಿ ಇವರು ಶಿಕ್ಷಣ ಕ್ಷೇತ್ರದಲ್ಲಿರುವ ಸಾಕಷ್ಟುಸಮಸ್ಯೆಗಳನ್ನು ಬಗೆಹರಿಸುವ ಹಾಗೂ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. 

ಇವರ ಗೆಲುವಿಗೆ ಮತ ನೀಡಿದ ಎಲ್ಲಾ ಪದವೀಧರ ಮತದಾರರಿಗೆ ಬಿಸಲೇಹಳ್ಳಿ ಜಗದೀಶ್‌ ಅಭಿನಂದನೆ ಸಲ್ಲಿಸಿದ್ದಾರೆ.