Asianet Suvarna News Asianet Suvarna News

ಚಿಕ್ಕಬಳ್ಳಾಪುರ : ಭೂ ಕಂಪನ ಅಲ್ಲ, ಅದು ಏರ್‌ ಬ್ಲಾಸ್ಟ್‌!

  • ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಹೋಬಳಿ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತ ಮಂಗಳವಾರ ರಾತ್ರಿ ಸಂಭವಿಸಿರುವುದು ಭೂ ಕಂಪನ ಅಲ್ಲ
  • ಅದು ಬರೀ ಏರ್‌ ಬ್ಲಾಸ್ಟ್‌ ಮಾತ್ರ. ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ
Chikkaballapur Mines and geological department clarifies Over Chintamani earthquake snr
Author
Bengaluru, First Published Nov 11, 2021, 12:08 PM IST

 ಚಿಕ್ಕಬಳ್ಳಾಪುರ(ನ.11):  ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಚಿಲಕಲನೇರ್ಪು ಹೋಬಳಿ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತ ಮಂಗಳವಾರ ರಾತ್ರಿ ಸಂಭವಿಸಿರುವುದು ಭೂ ಕಂಪನ(Earthquake) ಅಲ್ಲ. ಅದು ಬರೀ ಏರ್‌ ಬ್ಲಾಸ್ಟ್‌ (air Blast) ಮಾತ್ರ. ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ( Mines and geological department) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಮಿಟ್ಟಹಳ್ಳಿ ಗ್ರಾಮದಲ್ಲಿ ಸಂಭವಿಸಿರುವುದು ಭೂ ಕಂಪನ ಅಲ್ಲ. ಅದು ಏರ್‌ ಬ್ಲಾಸ್ಟ್‌ ಆಗಿರಬಹುದೆಂದು ಅಂದಾಜಿಸಿದ್ದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅಧ್ಯಯನ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳನ್ನು ಕೋರಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ವ್ಯಾಪಕ ಮಳೆ (Heavy Rain) ಆಗಿದ್ದು ಮಳೆಯ ನೀರು ಭೂಮಿಯೊಳಗೆ ಇಂಗುವ ಸಂದರ್ಭದಲ್ಲಿ ಭೂಮಿ ಪದರಗಳ ಮಧ್ಯೆ ಸಾಕಷ್ಟು ಬಿರುಕು ಇದೆ. ಈಗ ಮಳೆಯ ನೀರು ಭೂಮಿಯೊಳಗೆ ಇಂಗುವ ಸಂದರ್ಭದಲ್ಲಿ ಒಳಗೆ ಈ ರೀತಿಯ ಏರ್‌ ಬ್ಲಾಸ್ಟ್‌ ಆಗುವ ಸಾಧ್ಯತೆಗಳು ಇರುತ್ತೇವೆಯೆಂದು ಹಿರಿಯ ಅಧಿಕಾರಿಯೊಬ್ಬರು ಕನ್ನಡ ಪ್ರಭಗೆ ತಿಳಿಸಿದರು. ಮಿಟ್ಟಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತ ವ್ಯಾಪಕ ಪ್ರಮಾಣದಲ್ಲಿ ರೈತರು ಕೊಳವೆ ಬಾವಿಗಳನ್ನು ಕೊರೆಸಿದ್ದಾರೆ. ಹೀಗಾಗಿ ಈ ರೀತಿಯ ಏರ್‌ ಬ್ಲಾಸ್ಟ್‌ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಿಟ್ಟಹಳ್ಳಿಗೆ ಡೀಸಿ, ಎಸ್ಪಿ ಭೇಟಿ

ಚಿಂತಾಮಣಿ ತಾಲೂಕು ಮಿಟ್ಟಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮುಂಜಾನೆ ಜೋರಾದ ಶಬ್ದ ಕೇಳಿ ಬಂದು ಈ ಭಾಗದ ಜನರು ಆತಂಕದಲ್ಲಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಸ್ಥಳಕ್ಕೆ ಭೇಟಿ ಮಾಡಿ, ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌.ಲತಾ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವರದಿ ಪಡೆಯಲಾಗಿದ್ದು, ಸದರಿ ಪ್ರದೇಶದಲ್ಲಿ ಯಾವುದೇ ಭೂಕಂಪದ ವಾತಾವರಣ ಇರುವುದಿಲ್ಲವೆಂದು ವರದಿ ಬಂದಿದೆ. ಈ ಬಗ್ಗೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಚಿಂತಾಮಣಿ ತಹಸೀಲ್ದಾರ್‌ ಹನುಮಂತರಾಯಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಚಿಂತಾಮಣಿ ಸಮೀಪದ ಮಿಟ್ಟಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಭೂಕಂಪನ : ಜಿಲ್ಲೆಯ ಚಿಂತಾಮಣಿ (chintamanai) ಸಮೀಪದ ಮಿಟ್ಟಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಭೂಕಂಪನದ (Earthquake) ಅನುಭವವಾಗಿದೆ.

ರಾತ್ರಿ 11 ಗಂಟೆ ಸುಮಾರಿಗೆ ಜೋರಾದ ಶಬ್ದದೊಂದಿಗೆ ಭೂಮಿ  ನಡುಗಿದ ಅನುಭವವಾಗಿದ್ದ ಜನ ಭೂಕಂಪ ಆಗಿದೆ ಎಂದು ಭಯಭೀತರಾಗಿ ಮನೆಗಳಿಂದ ಹೊರ ಓಡಿ ಬಂದಿದ್ದಾರೆ. 

ಘಟನೆಯಿಂದಾಗಿ ಗ್ರಾಮದ (village) ಜನರಲ್ಲಿ ಆತಂಕ ಹೆಚ್ಚಿದೆ. ಸ್ಥಳಕ್ಕೆ ಚಿಂತಾಮಣಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆಯೇ ಎಂಬ ಮಾಹಿತಿ ಈವರೆಗೆ ತಿಳಿದು ಬಂದಿಲ್ಲ.

  • ಚಿಕ್ಕಬಳ್ಳಾಪುರ  ಭೂ ಕಂಪನ ಅಲ್ಲ, ಅದು ಏರ್‌ ಬ್ಲಾಸ್ಟ್‌! 
  • ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿರುವ ಪ್ರಾಥಮಿಕ ತನಿಖೆ
  •  ಪರಿಶೀಲನೆಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಶಿಫಾರಸು
  • ಆತಂಕ ಪಡುವ ಅಗತ್ಯವಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸ್ಪಷ್ಟನೆ
Follow Us:
Download App:
  • android
  • ios