ಚಿಕ್ಕಬಳ್ಳಾಪುರ ಜಿಲ್ಲೆಯ ಮಸೀದಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 55 ವರ್ಷದ ವ್ಯಾಪಾರಿಯನ್ನು ಬಂಧಿಸಲಾಗಿದೆ. ಆರೋಪಿಯು ಬಾಲಕಿಗೆ ಚಾಕ್ಲೆಟ್ ಕೊಡುವ ನೆಪದಲ್ಲಿ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ (ಜೂ. 4): ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಒಂದು ಮಸೀದಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೀಕರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 55 ವರ್ಷದ ವ್ಯಾಪಾರಿ ಮೆಫುಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಪುತ್ರನು ಸ್ಥಳೀಯ ಮುಸ್ಲಿಂ ಧರ್ಮೋಪದೇಶಕರಾಗಿರುವುದು ಗಮನಾರ್ಹ.

ಪೊಲೀಸರ ಪ್ರಕಾರ, ಮಂಗಳವಾರ ಸಂಜೆ ಮಸೀದಿಯ ಆವರಣದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಬಾಲಕಿಗೆ ಚಾಕ್ಲೆಟ್‌ಗಳನ್ನು ಕೊಡುವ ನೆಪದಲ್ಲಿ ಆಕೆಯನ್ನು ಮಸೀದಿಯ ಒಳಗಿನ ನಿರ್ಜನವಾಗಿರುವ ಕೊಠಡಿಗೆ ಕರೆದುಕೊಂಡು ಹೋಗಿದ್ದನು. ಅಲ್ಲಿ ಅವನು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪವಿದೆ. ಈ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಬಾಲಕಿ ಅಳುತ್ತಾ ಹೊರಬಂದಿದ್ದಾಳೆ. ಆಗ ಬಾಲಕಿಯ ತಾಯಿ ತಕ್ಷಣದಲ್ಲಿಯೇ ಮಗಳನ್ನು ಯಾಕೆ ಅಳುತ್ತಿದ್ದೀಯಾ ಎಂದು ವಿಚಾರಣೆ ನಡೆಸಿದ್ದಾರೆ. ಆದರೆ, ಶಂಕಿತ ಸ್ಥಿತಿಯಲ್ಲಿ ಇದ್ದ ಬಾಲಕಿ ಅಳುತ್ತಾ ತಾಯಿಗೆ ಘಟನೆಯ ಬಗ್ಗೆ ಹೇಳಿದ್ದು, ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.