Asianet Suvarna News Asianet Suvarna News

Chikkamagaluru Trekking: ಟ್ರೆಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್ ಬಲ್ಲಾಳರಾಯನ ದುರ್ಗ ಕೋಟೆ

ಪ್ರಕೃತಿ ಹಾಗೂ ಟ್ರೆಕ್ಕಿಂಗ್ ಪ್ರಿಯರನ್ನ ಬಾ ಎಂದು ಕೈಬೀಸಿ ಕರೆಯುತ್ತಿರೋ ಇಲ್ಲಿನ ಸೌಂದರ್ಯ ಪ್ರವಾಸಿಗರು, ಟ್ರೆಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್. ಆ ಸುಂದರ ರಮಣೀಯ ತಾಣವೇ ಬಲ್ಲಾಳರಾಯನ ದುರ್ಗದ ಕೋಟೆ.  

Chikkamagaluru Ballalarayana Durga Fort is a hot favourite spot for trekking lovers gow
Author
First Published Dec 15, 2022, 12:46 PM IST

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿಕ್ಕಮಗಳೂರು(ಡಿ.15): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕರಮ್ಯ ತಾಣ. ಪ್ರತಿ ಪ್ರವಾಸಿಗರಿಗು ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರೆಕ್ಕಿಂಗ್ ಪ್ರಿಯರನ್ನ ಬಾ ಎಂದು ಕೈಬೀಸಿ ಕರೆಯುತ್ತಿರೋ ಇಲ್ಲಿನ ಸೌಂದರ್ಯ ಪ್ರವಾಸಿಗರು, ಟ್ರೆಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್. ಆ ಸುಂದರ ರಮಣೀಯ ತಾಣವೇ ಬಲ್ಲಾಳರಾಯನ ದುರ್ಗದ ಕೋಟೆ. ಕಣ್ಣು ಹಾಯಿಸಿದಷ್ಟು ದೂರಕ್ಕೆ ಕಾಣೋ ನೈಜ ಸ್ವರ್ಗದ ಚೆಲುವು. ದಿಟ್ಟಿಸಿ ನೋಡುದ್ರೆ ಕೊನೆಯೇ ಇಲ್ಲವೆಂಬಂತೆ ಕಾಣೋ ಕೋಟೆಯ ಬೃಹದಾಕಾರದ ಗೋಡೆ. ಪ್ರತೀ ಹೆಜ್ಜೆಯಲ್ಲೂ ಪ್ರವಾಸಿಗರಿಗೆ ಸವಾಲೆಸೆಯೋ ನಿಸರ್ಗದ ಮಡಿಲು. ಇದು ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಬಲ್ಲಾಳರಾಯನ ದುರ್ಗದ ಕೋಟೆ. ಮೂಡಿಗೆರೆ ತಾಲೂಕಿನಲ್ಲಿದೆ. ರುದ್ರ ರಮಣೀಯವಾಗಿ ಕಾಣುವ ಈ ತಾಣವನ್ನ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಬರ್ತಾರೆ. ಅದ್ರಲ್ಲು ಟ್ರೆಕ್ಕಿಂಗ್ ಪ್ರಿಯರಿಗಂತೂ ಬಲ್ಲರಾಯನ ಕೋಟೆ ಹತ್ತೋದಂದ್ರೆ ಎಲ್ಲಿಲ್ಲದ ಉತ್ಸಾಹ ಹಾಗೂ ಸವಾಲು. ದುರ್ಗದಹಳ್ಳಿಯ ಎಂಡ್ ಪಾಯಿಂಟ್ನಲ್ಲಿ ವಾಹನ ನಿಲ್ಲಿಸಿ ಅರ್ಧ ಕಿ.ಮೀ. ಸಾಗಿದ್ರೆ ಅಬ್ಬಾ...! ಅನ್ನೋ ವೀವ್ ಪಾಯಿಂಟ್ ಕಣ್ಣಿಗೆ ಅಪ್ಪಳಿಸುತ್ತೆ. ಈ ಜಾಗದಲ್ಲಿ ನಿಂತು ನೋಡಿದ್ರೆ ಸ್ವರ್ಗಕ್ಕೆ ಮೂರೇ ಗೇಣು ಅನ್ಸತ್ತೆ. ಸುತ್ತಲಿನ ಹಚ್ಚ ಹಸಿರಿನ ವನರಾಶಿ ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತೆ. ಇಲ್ಲಿಗೆ ಬರೋ ಪ್ರವಾಸಿಗ್ರು ಬಗೆಬಗೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ನಿಸರ್ಗದ ಮಡಿಲಲ್ಲಿ ಕುಣಿದು ಕುಪ್ಪಳಿಸುತ್ತಾರೆ. 

ಬಲ್ಲಾಳರಾಯನ ದುರ್ಗದ ಕೆಳಭಾಗದಲ್ಲಿ ಸದ್ದು: ಅರಣ್ಯ ಇಲಾಖೆಯಿಂದ ಪರಿಶೀಲನೆ

ಗತ ವೈಭವ ಸಾರುವ ಬೃಹದಾಕಾರವಾದ ಗೋಡೆಗಳು :
ಒಂದನೇ ಬಲ್ಲಾಳರಾಯ, ರಕ್ಷಣಾ ಕೋಟೆಯನ್ನಾಗಿ ಈ ಕೋಟೆ ರಚಿಸಿದ್ದನೆಂಬ ಐತಿಹ್ಯವಿದೆ. ಗತ ವೈಭವವನ್ನ ಸಾರುವ ಕಲ್ಲಿನಿಂದ ನಿರ್ಮಾಣವಾಗಿದ್ದ ಬೃಹದಾಕಾರವಾದ ಗೋಡೆಗಳು ಇಂದಿಗೂ ಅಚ್ಚರಿ ಮೂಡಿಸುತ್ತವೆ. ಕಣ್ಣು ಹಾಯಿಸಿದಷ್ಟು ದೂರ ಗೋಚರಿಸೋ ಹಸಿರ ಪರ್ವತ ರಾಶಿ ಪ್ರವಾಸಿಗರ ಮನಸೂರೆಗೊಳಿಸೋದ್ರ ಜೊತೆ, ಇಲ್ಲಿನ ಪ್ರಪಾತ ಗಟ್ಟಿ ಗುಂಡಿಗೆಯನ್ನು ಒಮ್ಮೆ ನಡುಗಿಸುತ್ತೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನ ವರ್ಣಿಸೋಕೆ ಪದಗಳೇ ಸಾಲದು. ಸುತ್ತಲಿನ ಪರ್ವತಗಳು ನೋಡುಗರನ್ನ ಆಕರ್ಷಿಸಿದ್ರೆ, ಪರ್ವತಗಳ ನಡುವಿನ ಮಂಜು ಮುಸುಕಿದ ನೋಟ ನೋಡುಗರನ್ನ ನಿಬ್ಬೆರಗುಗೊಳಿಸುತ್ತೆ.

ಬಲ್ಲಾಳರಾಯನ ದುರ್ಗ: ಪ್ರವಾಸಿಗರಿಂದ ಹಣ ವಸೂಲಿ, ಕನಿಷ್ಟ ಮೂಲಭೂತ ಸೌಲಭ್ಯವೂ ಇಲ್ಲ!

ವರ್ಷ ಪೂರ್ತಿ ಧುಮ್ಮಿಕ್ಕೋ ಇಲ್ಲಿನ ರಾಣಿ ಝರಿಯನ್ನ ನೋಡೋದೆ ಪ್ರವಾಸಿಗರಿಗೆ ಎಲ್ಲಿಲ್ಲದ ಖುಷಿ. ಒಟ್ಟಾರೆ, ಬಲ್ಲಾರಾಯನ ಕೋಟೆಯ ವೀವ್ ಪಾಯಿಂಟಾಗಿರೋ ರಾಣಿ ಝರಿ ನೋಟ ಒಂದೊಂದು ಧಿಕ್ಕಲ್ಲಿ ಒಂದೊಂದು ರೀತಿ ಮನೋಜ್ಞವಾಗಿ ಕಾಣ್ತಿದೆ. ಮಳೆಗಾಲದ ಮಂಜು ರಾಣಿ ಝರಿಗೆ ಮುತ್ತಿಕ್ಕುತ್ತಿದ್ದರೆ ನೋಡುಗನ ಕಣ್ಣಿಗೆ ಹಬ್ಬ. ಆದ್ರೆ, ಬೇಸಿಗೆಯಲ್ಲಿ ಈ ರಾಣಿಝರಿಯ ನೋಟ ಪ್ರವಾಸಿಗರ ಎದೆಯನ್ನ ಝಲ್ ಎನಿಸುತ್ತೆ. ಅದೇನೆ ಇದ್ರು, ಇಲ್ಲಿನ ಟ್ರೆಕ್ಕಿಂಗ್ , ಪ್ರಕೃತಿ ಸೌಂದರ್ಯ ಎಲ್ಲವೂ ಅದ್ಭುತವೇ ಸರಿ.

Follow Us:
Download App:
  • android
  • ios