Chikkamagaluru: ರಾಹುಲ್‌ಗಾಂಧಿ ಅನರ್ಹ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮಾನಹಾನಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯತ್ವದಿಂದ 'ಅನರ್ಹ' ಗೊಳಿಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು (ಮಾ.25): ಮಾನಹಾನಿಕರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯತ್ವದಿಂದ 'ಅನರ್ಹ' ಗೊಳಿಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಯಕರ್ತರು ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹನುಮಂತಪ್ಪ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿದರು. ಕೇಂದ್ರ ಸರಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರದ ದುರಾಡಳಿತದ ಬಗ್ಗೆ ಟೀಕಿಸುವವರ ಹೋರಾಟದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ.
ನನ್ನ ಖಡ್ಗ ಕಾಫಿಗರ ರಕ್ತಕ್ಕಾಗಿ ತಹತಹಿಸುತ್ತಿದೆ: ಟಿಪ್ಪು ಖಡ್ಗದ ಮೇಲಿನ ಬರಹ ರಿವೀಲ್
ಕಾಂಗ್ರೆಸ್ ನಾಯಕರಿಂದ ತೀವ್ರ ಆಕ್ರೋಶ : ರಾಹುಲ್‌ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸುವ ಮೂಲಕ ಮೋದಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಇಬ್ಬರು ಶಾಸಕರಿಗೆ ಶಿಕ್ಷೆ ಪ್ರಕಟವಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ, ದೇಶ ಮತ್ತು ರಾಜ್ಯಕ್ಕೆ ಪ್ರತ್ಯೇಕ ಕಾನೂನು ಇದೆಯೇ ಎಂದು ಪ್ರಶ್ನಿಸಿದರು. ಪ್ರಧಾನಿ ಮೋದಿ ನೇತೃತ್ವದ ಆಡಳಿತದಲ್ಲಿ ಪ್ರಶ್ನೆ ಮಾಡುವವರ ಬಾಯಿ ಮುಚ್ಚಿಸುವ ಕುತಂತ್ರ ಈ ಹಿಂದಿನಿಂದಲೂ ನಡೆಯುತ್ತಿದ್ದು, ರಾಹುಲ್ ಗಾಂಧಿ ಪ್ರಕರಣ ಇದಕ್ಕೊಂದು ಸಾಕ್ಷಿ ಎಂದು ಸಂದೀಪ್ ಟೀಕಿಸಿದರು.
ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ರಾಹುಲ್ ಗಾಂಧಿ ಅವರು ಅಂಬೇಡ್ಕರ್ ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಜನರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಬಡವರು, ಕಾರ್ಮಿಕರು, ರೈತರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗಗಳ ಶೋಷಿತರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಕೇಂದ್ರ ಸರಕಾರ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮಾಡುತ್ತಿದ್ದಾರೆ. ರಾಹುಲ್‌ಗಾಂಧಿ ಹೋರಾಟದಿಂದ ಕೇಂದ್ರ ಸರ್ಕಾರ ದವೈಫಲ್ಯಗಳು ಬಟಾಬಯಲಾಗುತ್ತಿದ್ದು, ಇದರಿಂದ ಬೆದರಿರುವ ಮೋದಿ ಸರಕಾರ ಸಂವಿಧಾನಿಕ ಸಂಸ್ಥೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿ ಹೋರಾಟಗಾರರ ಧ್ವನಿ ಅಡಗಿಸುತ್ತಿದೆ ಎಂದು ಟೀಕಿಸಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರಕ್ಕೆ ಶಾಸಕ ಸಿಟಿ ರವಿ ಆಪ್ತನಿಗೆ ಘೇರಾವ್: ಸ್ಥಳದಿಂದ ಕಾಲ್ಕಿತ್ತು ಬಚಾವ್
ಈ ಪ್ರತಿಭಟನೆಯ ವೇಳೆ ಮುಖಂಡರಾದ ಶಿವಾನಂದಸ್ವಾಮಿ, ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್‌ಮೋಸೆಸ್ ಮತ್ತಿತರರು ಮಾತನಾಡಿದರು. ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್, ಮುಖಂಡರಾದ ಎಚ್.ಡಿ.ತಮ್ಮಯ್ಯ, ಮತ್ತಿತರರು ಭಾಗವಹಿಸಿದ್ದರು.