Asianet Suvarna News Asianet Suvarna News

ಈದ್ : ಹಲವು ಆಚರಣೆಗೆ ಕಡ್ಡಾಯ ನಿಷೇಧ

ಈದ್ ಆಚರಣೆ 30 ರಂದು ನಡೆಯಲಿದ್ದು ಹಲವು ಆಚರಣೆಗಳಿಗೆ ನಿಷೇಧ ಹೇರಲಾಗಿದೆ. 

Chikkamagaluru District Administration Restriction On Eid celebration snr
Author
Bengaluru, First Published Oct 29, 2020, 2:06 PM IST

ಚಿಕ್ಕಮಗಳೂರು (ಅ.29) : ರಾಜ್ಯಾದ್ಯಂತ ಅ.30ರಂದು ಈದ್‌ಮಿಲಾದ್‌ ಹಬ್ಬದ ಪ್ರಯುಕ್ತ ಆಚರಿಸಲಾಗುತ್ತಿದ್ದ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ(ಜುಲೂಸ್‌) ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕೋವಿಡ್‌ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮೊಹಲ್ಲಾದಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಸೀದಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್‌-19 ಶಿಷ್ಟಾಚಾರದೊಂದಿಗೆ ಸಾಕಷ್ಟುಮುನ್ನೆಚ್ಚರಿಕಾ ಕ್ರಮಗಳ ಜತೆಗೆ ಮಾಸ್ಕ್‌ ಧರಿಸಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದ್ ಮಿಲಾದ್ - ಭಾರತದಲ್ಲಿ ಹಬ್ಬದ ದಿನ, ಸಮಯ: ಆಚರಣೆಯ ಮಹತ್ವವೇನು ?

ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಡಿಜಿಟಲ್‌ ಸೌಂಡ್‌ ಸಿಸ್ಟಂ(ಡಿಜೆ) ಬಳಸುವುದನ್ನು ನಿಷೇಧಿಸಲಾಗಿದೆ ಹಾಗೂ 60 ವರ್ಷ ಮೇಲ್ಪಟ್ಟನಾಗರಿಕರು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು. ಖಬರ್‌ಸ್ತಾನ್‌ ಒಳಗೊಂಡಂತೆ ಯಾವುದೇ ತೆರೆದ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಮತ್ತು ಈ ಕುರಿತು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ತಿಳಿಸಿದ್ದಾರೆ.

Follow Us:
Download App:
  • android
  • ios