ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್: ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರಿನಲ್ಲಿ ಶಾಲೆಗೆ ಹೋಗಲು ಬಸ್‌ ನಿಲ್ದಾಣದ ಬಳಿ ನಿಂತಿದ್ದ ಶಾಲಾ ಮಕ್ಕಳ ಗುಂಪಿನ ಮೇಲೆ ಖಾಸಗಿ ಬಸ್‌ ಹರಿದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Chikkamagaluru private bus rammed into school going children group two is critical sat

ಚಿಕ್ಕಮಗಳೂರು (ಸೆ.07): ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗೆ ಹೋಗಲು ಬಸ್‌ ನಿಲ್ದಾಣದಲ್ಲಿ ನಿಂತ 7 ಮಕ್ಕಳ ಮೇಲೆ ಖಾಸಗಿ ಬಸ್‌ ಹರಿಸಿದೆ. ಈ ಘಟನೆಯಲ್ಲಿ ಐವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದರೆ, ಉಳಿದ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹೌದು, ಪ್ರತಿನಿತ್ಯ ಶಾಲೆಗೆ ಹೋಗಲು ಬಸ್‌ ನಿಲ್ದಾಣಕ್ಕೆ ಬಂದು ನಿಲ್ಲುವಂತೆ ಇಂದು (ಗುರುವಾರ) ಕೂಡ ಬಸ್‌ ನಲ್ದಾಣದ ಬಳಿ ಮಕ್ಕಳು ಬಂದು ನಿಂತಿದ್ದಾರೆ. ಆದರೆ, ಅತಿವೇಗದಿಂದ ಬಂದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ, ಬಸ್‌ ನಿಲ್ದಾಣದ ಬಳಿ ನಿಂತಿದ್ದ ಮಕ್ಕಳ ಗುಂಪಿನ ಮೇಲೆ ಹರಿದಿದೆ. ಈ ವೇಳೆ ಎಲ್ಲ ಮಕ್ಕಳು ಓಡಲು ಮುಂದಾದರೂ ಇಬ್ಬರು ಮಕ್ಕಳಿಗೆ ಬಸ್‌ ಬಂದು ಗುದ್ದಿದೆ. ಬಸ್‌ನ ಗಾಲಿಗಳು ಮಕ್ಕಳ ಮೇಲೆ ಜರಿಯದ ಕಾರಣ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬಸ್‌ ಗುದ್ದಿದ ರಭಸಕ್ಕೆ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತ ಮಾಡಿ ಎಸ್ಕೇಪ್: ಗಾಯಾಳುಗಳನ್ನ ಆಸ್ಪತ್ರೆಗೆ ಸೇರಿದ್ದೇನೆ, ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ, ನಟ ಚಂದ್ರಪ್ರಭ

ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಘಟನೆ ನಡೆದಿದೆ. ತುಳಸಿ (15), ನಿವೇದಿತ (14), ಗಂಭೀರ ಸ್ಥಿತಿ ಗಂಭೀರವಾಗಿದೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರ, ಉಳಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓವರ್ ಸ್ಪೀಡ್ ಕಂಟ್ರೋಲ್ ತಪ್ಪಿದ ಖಾಸಗಿ ಬಸ್‌ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್  ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಮಕ್ಕಳಿಗೆ ಡಿಕ್ಕಿ ಹೊಡೆದ ನಂತರವೂ ಬಸ್‌ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿದ್ದ ಮರ ಹಾಗೂ ಮನೆಯ ಗೋಡೆಗೆ ಗುದ್ದಿದೆ. ಈ ಘಟನೆಯಲ್ಲಿ ರಸ್ತೆ ಬದಿಯಿದ್ದ ಮನೆಯ ಮುಂಭಾಗದ ಛಾವಣಿಯೂ ಸಂಪೂರ್ಣ ಜಖಂ ಆಗಿದೆ.

ಚಿಕ್ಕಮಗಳೂರು: ಸನಾತನ ಧರ್ಮ ಹೇಳಿಕೆ ಖಂಡಿಸಿ ಉದಯನಿಧಿ ಪ್ರತಿಕ್ರತಿ ದಹಿಸಿ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ಹೆಚ್ಚಾಗಿ ಕೆಎಸ್ಆರ್‌ಟಿಸಿ ಬಸ್‌ಗಳು ಸಂಚಾರ ಮಾಡದ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳ ಸಂಚಾರ ಹೆಚ್ಚಾಗಿದೆ. ಇನ್ನು ಅತಿವೇಗದ ಚಾಲನೆ ಮತ್ತು ನಿರ್ಲಕ್ಷ್ಯ ಚಾಲನೆಯಿಂದಾಗಿ ಮಕ್ಕಳು ಮತತು ವೃದ್ಧರಿಗೆ ಆಗಾಗ ಅಪಘಾತ ಆಗುವ ಘಟನೆಗಳು ನಡೆಯುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡ ವೇಗವಾಗಿ ವಾಹನ ಚಾಲನೆ ಮಾಡುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ಗ್ರಾಮಸ್ಥರು ಖಾಸಗಿ ವಾಹನಗಳ ಚಾಲಕರು ಮತ್ತು ಮಾಲೀಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. 

Latest Videos
Follow Us:
Download App:
  • android
  • ios