ಚಿಕ್ಕಮಗಳೂರು [ಜ.09]: ಮಲೆನಾಡನ್ನೇ ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣ ಒಂದರ ಸಂಬಂಧ ಇಲ್ಲಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಲಿದೆ. 

2016ರಲ್ಲಿ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ ಪರೀಕ್ಷೆ ಮುಗಿಸಿ ವಾಪಸಾಗುತ್ತಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. 

ಪ್ರಕರಣ ಸಂಬಂಧ ಪ್ರದೀಪ್, ಸಂತೋಷ್ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ನಡೆಸಿ ಕೊಲೆಗೈದು ಪಾಳು ಬಾವಿಯಲ್ಲಿ ಹಾಕಿದ್ದರು. 

ಬಂದ್‌ ವೇಳೆ ಕರ್ತವ್ಯದಲ್ಲಿದ್ದ ಪೇದೆ ಹೃದಯಾಘಾತದಿಂದ ಸಾವು...

ಈ ಸಂಬಂಧ ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇದೀಗ ಈ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. 

ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಎಂದು ಕುಟುಂಬಸ್ಥರು ಆಗ್ರಹಿಸಿದ್ದು, ಇಂದು ಮಹತ್ವದ ತೀರ್ಪು ಪ್ರಕಟವಾಗಲಿದೆ.