Asianet Suvarna News Asianet Suvarna News

ರೈತರ ಗಾಯದ ಮೇಲೆ ಬರೆ ಎಳೆದ ಸರ್ಕಾರ: ಸಂಸದ ಜೊಲ್ಲೆ

ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಆದರೆ, ಸದ್ಯದ ಸರ್ಕಾರದ ಆದೇಶದಿಂದ ಕನಿಷ್ಠ ₹2 ಲಕ್ಷ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆ ರೈತರಿಗೆ ಎದುರಾಗಿದೆ. ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿದೆ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ 

Chikkodi BJP MP Annasaheb Jolle Slams Karnataka Congress Government grg
Author
First Published Nov 10, 2023, 9:11 AM IST

ಚಿಕ್ಕೋಡಿ(ನ.10): ರೈತರು ಸ್ವಂತ ಖರ್ಚಿನಲ್ಲಿ ಕೃಷಿ ಪಂಪಸೆಟ್‌ಗಳಿಗೆ ವಿದ್ಯುತ್ ಪಡೆಯಬೇಕು ಎನ್ನುವ ಸರ್ಕಾರದ ಆದೇಶ ಖಂಡನೀಯ. ಈಗಾಗಲೇ ಬರಗಾಲ ಹಾಗೂ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ನಿಂದ ಕಂಗೆಟ್ಟಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಟೀಕಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಆದರೆ, ಸದ್ಯದ ಸರ್ಕಾರದ ಆದೇಶದಿಂದ ಕನಿಷ್ಠ ₹2 ಲಕ್ಷ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆ ರೈತರಿಗೆ ಎದುರಾಗಿದೆ. ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿದೆ. ಹಿಂಗಾರು ಮಳೆಯ ಅಭಾವದಿಂದ ರೈತನ ಬೆಳೆಗಳು ಸಂಪೂರ್ಣ ನಾಶವಾಗಿದೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ಘೋಷಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ಕಳವಳಕಾರಿ ಸಂಗತಿ ಎಂದರು.

2028ರ ಚುನಾವಣೆಗೆ ಸಿಎಂ ಸ್ಥಾನ ಕೇಳುವೆ: ಸತೀಶ್‌ ಜಾರಕಿಹೊಳಿ

ಅಳಿದುಳಿದ ಬೆಳೆ ಉಳಿಸಿಕೊಳ್ಳಲು ರೈತರು ತೆರೆದ ಬಾವಿ, ಕೊಳವೆ ಬಾವಿಗಳ ಮೊರೆ ಹೊಗಿದ್ದಾರೆ. ಆದರೆ, ಹಗಲು ಹೊತ್ತಿನಲ್ಲಿ ಸಮರ್ಪಕ ವಿದ್ಯುತ್ ಸಿಗದೆ ರೈತರು ಬಸವಳಿದಿದ್ದಾರೆ. ಈ ಹಿಂದಿನ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿ ಅನೇಕ ರೈತ ಪರ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ಇಂದಿನ ಸರ್ಕಾರ ರದ್ದು ಮಾಡಿರುವುದು ಖಂಡನೀಯ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಈ ಆದೇಶ ಹಿಂಪಡೆಯದಿದ್ದರೇ ರಾಜ್ಯದ ಸುಮಾರು 35 ಲಕ್ಷ ಪಂಪ್ ಸೆಟ್‌ಗಳ ಬಳಕೆದಾರ ರೈತರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

Follow Us:
Download App:
  • android
  • ios