ತುಮಕೂರು(ಮಾ.14): ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಏಳನೇ ತರಗತಿ ಹೊರತು ಪಡಿಸಿ ಉಳಿದ ಮಕ್ಕಳು ಮನೆಯತ್ತ ಮುಖ ಮಾಡಿದ್ದಾರೆ.

"

ರಾಜ್ಯದಲ್ಲಿ ಕೊರೊನಾ ಹರಡುವ ಭೀತಿಯಿಂದ ಈಗಾಗಲೇ ರಾಜ್ಯ ಸರ್ಕಾರ ಒಂದು ವಾರ ಬಂದ್ ಘೋಷಣೆ ಮಾಡಿದ್ದು, ಸಿದ್ದಗಂಗಾ ಮಠದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳನ್ನು ಊರಿಗೆ ಕಳುಹಿಸಲಾಗಿದೆ.

ಕೊರೋನಾಗೆ 1 ವಾರ ಅಘೋಷಿತ ಕರ್ನಾಟಕ ಬಂದ್ : ಏನೇನು ಇರಲ್ಲ..?

ನಾಳೆಯಿಂದ ಮಕ್ಕಳನ್ನು ಮಠದಿಂದ ಮನೆಗೆ ಕಳುಹಿಸಲು ನಿರ್ಧಾರ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಹಾಗೂ 7ನೇ ತರಗತಿ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಎಲ್ಲಾ ಮಕ್ಕಳನ್ನು ವಾಪಸ್ ಕಳುಹಿಸಲು ತೀರ್ಮಾನಿಸಲಾಗಿದೆ.

ಮಠದಲ್ಲಿ 10 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಠದಲ್ಲಿರುವ ಅಂಗಡಿಗಳನ್ನು ಮುಚ್ಚಲು ನಿರ್ಧಾರ ಮಾಡಿದ್ದು, ಮಠಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕೆಲ ಪೋಷಕರು ಸ್ವಪ್ರೇರಣೆಯಿಂದ ಮಕ್ಕಳನ್ನು ವಾಪಸ್ ಕರೆದುಕೊಂಡು ಹೋಗುತ್ತಿದ್ದಾರೆ.