ಮಾನ್ವಿ(ಅ.3): ನೇತಾಜಿ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ 150ನೇ ಜಯಂತಿ, ಮಾಜಿ ಪ್ರಧಾನಿ ದಿ.ಲಾಲ್‌ಬಹದ್ದೂರ್‌ ಶಾಸ್ತ್ರಿ 114ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲೆಯ 150 ವಿದ್ಯಾರ್ಥಿಗಳು ಗಾಂಧಿ ವೇಷ ಹಾಕಿಕೊಂಡು ವಿಶಿಷ್ಟ ರೀತಿಯಲ್ಲಿ ಕಂಗೊಳಿಸಿದರು.

ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ ಅವರು ಗಾಂಧೀಜಿಯವರ 150ನೇ ಜಯಂತಿ ಅಂಗವಾಗಿ ವಿದ್ಯಾರ್ಥಿಗಳು ಗಾಂಧಿ ವೇಷ ಹಾಕಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ಈ ವೇಳೆ ಪಕ್ಷಿಪ್ರೇಮಿ ಸಲ್ಲಾವುದ್ದೀನ್‌, ಸಂಸ್ಥೆಯ ಕಾರ್ಯದರ್ಶಿ ಕೆ.ವಿಜಯಲಕ್ಷ್ಮೀ, ಮುಖ್ಯೋಫಾಧ್ಯಯನಿ ಅನೀಸ್‌ ಫಾತಿಮಾ, ಬಸವರಾಜ, ಸಾವಿತ್ರಿ, ಶೀಲಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಮಾನ್ವಿ ಪಟ್ಟಣದ ನೇತಾಜಿ ಶಾಲೆಯ 150 ವಿದ್ಯಾರ್ಥಿಗಳು ಗಾಂಧಿ ವೇಷದಾರಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.