ಚಿತ್ರದುರ್ಗ(ಫೆ.18): ಚಿತ್ರದುರ್ಗ ಜಿಲ್ಲಾಧಿಕಾರಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿದೆ. ಬಸ್‌ ಮುಂಭಾಗ ಹಾನಿಯಾಗಿದ್ದು, ಡಿಸಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಶಿವಗಂಗಾ ಗ್ರಾಮದ ಬಳಿ ಚಿತ್ರದುರ್ಗ ಡಿಸಿ ಕಾರಿಗೆ ಬಸ್ ಡಿಕ್ಕಿಯಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಡಿಸಿ ವಿನೋತ್ ಪ್ರಿಯಾ ಪ್ರಯಾಣಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ಡಿಕ್ಕಿಯಾಗಿದೆ. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಎಡಗೈ ಬೆರಳಿಗೆ ಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆದು ಡಿಸಿ ವಿನೋತ್ ಪ್ರಿಯಾ ವಿಶ್ರಾಂತಿಗೆ ತೆರಳಿದ್ದಾರೆ.

'ಹಾಡುತ್ತಾ, ಕುಣಿಯುತ್ತಾ ಇದ್ದವರು ಕ್ಷಣದಲ್ಲೇ ಹೆಣವಾದ್ರು..'!

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಎಸ್‌ಆರ್‌ಟಿಸಿ ಮುಂಭಾಗವೂ ಹಾನಿಯಾಗಿದೆ. ಡಿಸಿ ವಿನೋತ್ ಪ್ರಿಯಾ ಅವರು ಬೇರೆ ಕಾರಿನಲ್ಲಿ ಮರಳಿದ್ದಾರೆ. ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.