ಮಹಿಳೆ ಜೊತೆ ಅಕ್ರಮ ಸಂಬಂಧ ಹಿನ್ನಲೆ, ಚಿತ್ರದುರ್ಗದಲ್ಲಿ ಮನೆಗೆ ನುಗ್ಗಿ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಬೆಳಗ್ಗೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಏಕಾಂಗಿಯಾಗಿದ್ದ ವೇಳೆ ಕೃತ್ಯ. 

ಚಿತ್ರದುರ್ಗ (ಮೇ.03): ಮಹಿಳೆ ಜೊತೆ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಮನೆಗೆ ನುಗ್ಗಿ ವ್ಯಕ್ತಿಯೊಬ್ಬನ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಬಡಾವಣೆಯಲ್ಲಿ ನಡೆದಿದೆ. 46 ವರ್ಷದ ಪ್ರಮೋದ್ ಭೀಕರವಾಗಿ ಕೊಲೆಯಾಗಿದ್ದಾನೆ. ನಿನ್ನೆ (ಮೇ.02) ರಾತ್ರಿ ಈ ಹತ್ಯೆ ನಡೆದಿದ್ದು ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಏನಿದು ಘಟನೆ?

ರಾಮದಾಸ್ ಕಂಪೌಂಡ್ ಬಡಾವಣೆಯ ನಿವಾಸಿ ಪ್ರಮೋದ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಅನ್ನೋ ಆರೋಪಗಳು ಕೇಳಿಬಂದಿದೆ. ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಕಾರಣ ಮಹಿಳೆಯ ಕುಟುಂಬಸ್ಥರು ತೀವ್ರ ಆಕ್ರೋಶಗೊಂಡಿದ್ದರು. ಈ ಸಂಬಂಧ ಈಗಾಗಲೇ ಮಾತಿನ ಚಕಮಕಿಗಳು ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರಮೋದ್ ಮೇಲೆ ಕಣ್ಣಿಟ್ಟಿದ್ದ ಮಹಿಳೆ ಕುಟುಂಬಸ್ಥರು ನಿನ್ನೆ ತಡ ರಾತ್ರಿ ಪ್ರಮೋದ್ ಮನೆಗೆ ನುಗ್ಗಿದ್ದಾರೆ.

ಮನೆಯಲ್ಲಿ ಏಕಾಂಗಿಯಾಗಿರುವ ಪ್ರಮೋದ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಏಕಾಂಗಿಯಾಗಿದ್ದ ಕಾರಣ ಮನೆಯಲ್ಲಿ ಹತ್ಯೆ ಮಾಡಲು ಪ್ಲಾನ್ ಮಾಡಲಾಗಿತ್ತು. ಹೀಗಾಗಿ ತಡ ರಾತ್ರಿ ಮಾರಾಕಸ್ತ್ರಗಳಿಂದ ಆರೋಪಿಗಳು ಮನೆಗೆ ನುಗ್ಗಿದ್ದಾರೆ. ನೇರವಾಗಿ ಪ್ರಮೋದ್ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ಬಳಿಕ ಆರೋಪಿಗೆ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಡಿವೈಎಸ್ಪಿ ಅರುಣ್ ಗೌಡ, ಸಿಪಿಐ ನಯೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ರಾಯಚೂರಿನಲ್ಲಿ ಟ್ರಾಕ್ಟರ್ ಹರಿಸಿ ಕೊಲೆ

ರಾಯಚೂರು ಜಿಲ್ಲೆ ದೇವದುರ್ಗ ತಾ. ಜಾಗಟಗಲ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟ್ಯಾಕ್ಟರ್ ಹರಿಸಿ ವ್ಯಕ್ತಿ ಕೊಲೆ ಮಾಡಿದ ಘಟನೆ ನಡೆದಿದೆ. ಮಣ್ಣು ತುಂಬುವ ಕೆಲಸಕ್ಕಾಗಿ ಟ್ಯಾಕ್ಟರ್ ಡ್ರೈವಿಂಗ್ ಗೆ ಹೋಗಿದ್ದ ಸಿದ್ದಪ್ಪನನ್ನು ಹತ್ಯೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಣ್ಣು ತುಂಬುವ ಕೆಲಸದ ವೇಳೆ ಸಿದ್ದಪ್ಪನ ಮೇಲೆ ಮತ್ತೊಬ್ಬ ಡ್ರೈವರ್ ಮಲ್ಲಪ್ಪ ಹಾಗೂ ಇತರರು ಟ್ಯಾಕ್ಟರ್ ಹರಿಸಿ ಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಸಿದ್ದಪ್ಪ ಆಸ್ಪತ್ರೆಗೆ ಸಾಗುವ ಮಧ್ಯೆ ಸಾವು ಕಂಡಿದ್ದಾರೆ. ಘಟನೆ ಬಳಿಕ ಆರೋಪಿಗಳ ಮನೆ ಎದುರು ಸಿದ್ದಪ್ಪನ ಮೃತದೇಹ ಇರಿಸಿ ಪ್ರತಿಭಟನೆ ನಡೆಸಿದ್ದಾರೆ. ಗಬ್ಬುರೂ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.