SJM ವಿದ್ಯಾಪೀಠದ ಕಾರ್ಯದರ್ಶಿ SB ವಸ್ತ್ರದಮಠ‌ಗೆ ಪವರ್ ಆಫ್ ಅಟಾರ್ನಿ ನೀಡಿದ ಮುರುಘಾಶ್ರೀ

Murugha Shree Row:  ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹಾಗೂ ನಿವೃತ್ತ ನ್ಯಾಯಾಧೀಶ ವಸ್ತ್ರದಮಠ‌ ಅವರಿಗೆ ಮುರುಘಾಶ್ರೀ ಪವರ್ ಆಫ್ ಅಟಾರ್ನಿ ನೀಡಿದ್ದಾರೆ

Chitradurga Murugha Shree gives Power of Attorney to S B Vastramath of SJM Vidyapeetha mnj

ಚಿತ್ರದುರ್ಗ (ಅ. 15): ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬ್ರಹನ್ಮಠದ ವಿದ್ಯಾಪೀಠಕ್ಕೆ ಸೇರಿದ ಸಂಸ್ಥೆಗಳಿಗೆ ಸಂಬಂಧಿಸಿದ ಪವರ್‌ ಆಫ್‌ ಅಟಾರ್ನಿಯನ್ನು (Power of Attorney) ಜೈಲಿನಿಂದಲೇ ಕಾರ್ಯಗತಗೊಳಿಸಲು ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ ನೀಡಿದೆ. ಈ ಬೆನ್ನಲ್ಲೇ  ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಗೆ  ಮುರುಘಾಶ್ರೀ ಪವರ್ ಆಫ್ ಅಟಾರ್ನಿ ನೀಡಿದ್ದಾರೆ.  ಎಸ್ ಜೆ ಎಂ ವಿದ್ಯಾಪೀಠದ ಚೆಕ್ ಸಹಿ ಸೇರಿ ವಿವಿಧ ಆಡಳಿತಾತ್ಮಕ ನಿರ್ಧಾರಕ್ಕಾಗಿ ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹಾಗೂ ನಿವೃತ್ತ ನ್ಯಾಯಾಧೀಶ ವಸ್ತ್ರದಮಠ‌ (S B Vastramath) ಪವರ್ ಆಫ್ ಅಟಾರ್ನಿ ನೀಡಲಾಗಿದೆ.  ಅಧಿಕೃತವಾಗಿ ನೋಟರಿ ಮಾಡಿ ಮುರುಘಾಶ್ರೀ ಪವರ್ ಆಫ ಅಟಾರ್ನಿ ನೀಡಿದ್ದಾರೆ.  

ಪವರ್‌ ಆಫ್‌ ಅಟಾರ್ನಿ ಅನುಮತಿ ನೀಡಿದ್ದ ಕೋರ್ಟ್: ವಿದ್ಯಾಪೀಠದ ಸಂಸ್ಥೆಗಳ ನೌಕರರು ಮತ್ತು ಇತರೆ ಸಿಬ್ಬಂದಿಗೆ ವೇತನ ವಿತರಿಸುವ ಸಂಬಂಧ ಚೆಕ್‌ಗಳಿಗೆ ಶರಣರು ಅಕ್ಟೋಬರ್ 3,6 ಮತ್ತು 9ರಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿಯೇ ಸಹಿ ಮಾಡಬಹುದು ಎಂದು ಸೆ.30ರಂದು ಹೈಕೋರರ್ಟ್ ಆದೇಶಿಸಿತ್ತು. ಅಲ್ಲದೆ, ಈ ಆದೇಶ ಅಕ್ಟೋಬರ್‌ ತಿಂಗಳಿಗೆ ವೇತನ ವಿತರಿಸುವುದಕ್ಕೆ ಮಾತ್ರ ಅನ್ವಯಿಸಲಿದೆ. ನೌಕರರಿಗೆ ವೇತನ ಪಾವತಿಸುವುದಕ್ಕೆ ಸಂಬಂಧಿಸಿದ ಚೆಕ್‌ಗಳನ್ನು ಬಿಟ್ಟು ಇತರೆ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ನೀಡಲಾಗಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿತ್ತು

ಮುರುಘಾಮಠದ ಸುರಕ್ಷತೆ ದೃಷ್ಟಿಯಿಂದ ಆವರಣದಲ್ಲಿ ಸಿಸಿಟಿವಿ ಅಳವಡಿಕೆ

ಆದರೆ, ಪವರ್‌ ಆಫ್‌ ಅಟಾರ್ನಿ ಕಾರ್ಯಗತಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡಿರಲಿಲ್ಲ. ಇದರಿಂದ ಪವರ್‌ ಆಫ್‌ ಅಟಾರ್ನಿ ಕಾರ್ಯಗತಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೋರಿ ಶರಣರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಬುಧವಾರ ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್ ಅನುಮತಿ ಆದೇಶ ನೀಡಿ ಅರ್ಜಿ ಇತ್ಯರ್ಥಪಡಿಸಿತ್ತು.

Latest Videos
Follow Us:
Download App:
  • android
  • ios